ರಾಜ್ಯ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇಕ್‍ಶಿಫ್ಟ್ ಆಸ್ಪತ್ರೆಗಳ ಸ್ಥಾಪನೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್

ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐಸಿಯು ಹೊಂದಿರುವ ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇಕ್‍ಶಿಫ್ಟ್ ಆಸ್ಪತ್ರೆಗಳ ಸ್ಥಾಪನೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಸಾಂಕೇತಿಕ ಚಿತ್ರ
Published On :

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐಸಿಯು ಹೊಂದಿರುವ ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಮೈಸೂರು, ಬೀದರ್, ಹುಬಳ್ಳಿ, ಬೆಳಗಾವಿ ಹಾಗೂ ಶಿವಮೊಗ್ಗದಲ್ಲಿ ಮಾಡ್ಯೂಲರ್ ಐಸಿಯು ಹೊಂದಿರುವ 200-250 ಮೇಕ್‍ಶಿಫ್ಟ್ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. 15 ದಿನದೊಳಗೆ ಈ ಆಸ್ಪತ್ರೆಗಳು ನಿರ್ಮಾಣವಾಗಬೇಕಿದೆ ಎಂದರು.

ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಗೊಂಡ ವೈರಾಣು ಬಂದಿದ್ದು, ಹೊಸ ರೋಗದಂತಿದೆ. ರಾಜ್ಯದಲ್ಲಿ ಹೆಚ್ಚು ಜನರು ಸೋಂಕಿತರಾದರೂ ಸಾವಿನ ಪ್ರಮಾಣ 0.4% ರಷ್ಟಿದೆ. ರಾಜ್ಯ ಸರ್ಕಾರ ಇದಕ್ಕಾಗಿಯೇ ಬಿಗಿಯಾದ ಕ್ರಮ ವಹಿಸಿದೆ. ಹೊಸ ಮಾರ್ಗಸೂಚಿಯು ಜನರು ಗುಂಪುಗೂಡುವುದನ್ನು, ಅನಗತ್ಯ ಓಡಾಟ ತಪ್ಪಿಸುತ್ತದೆ ಎಂದರು.

ಕೋವಿಡ್ ಲಸಿಕೆ ಬೇಗ ಬಂದಿದ್ದು, ಲಸಿಕೆ ಪಡೆಯುವುದರಲ್ಲಿ ಮುಂಚೂಣಿಯಲ್ಲಿರಬೇಕು. ವೈರಾಣು ರೂಪಾಂತರವಾದಂತೆ ಸೋಂಕು ಹೆಚ್ಚಾಗಬಹುದು. ವೈದ್ಯಕೀಯ ಜಗತ್ತಿಗೆ ಇದು ಸವಾಲಾಗಿ ಪರಿಣಮಿಸಿದೆ. ಮೊದಲ ಅಲೆಯಲ್ಲಿ ಯಾರಿಗೂ ಇಷ್ಟು ಆಕ್ಸಿಜನ್ ಅಗತ್ಯವಿರಲಿಲ್ಲ. ಆದರೆ ಈಗ ಅನೇಕರು ಆಕ್ಸಿಜನ್ ಬೇಕೆಂದು ಹೇಳುತ್ತಿದ್ದಾರೆ. ಕಳೆದ ವರ್ಷ ಪೀಕ್ ಇದ್ದಾಗಲೂ 300-350 ಟನ್ ಆಕ್ಸಿಜನ್ ಪೂರೈಸಲಾಗಿತ್ತು. ಈ ಹಂತದಲ್ಲಿ 500 ಟನ್ ಬಳಕೆಯಾಗುತ್ತಿದೆ. ಇದು ತೀವ್ರವಾದರೆ ಆಕ್ಸಿಜನ್ ಬೇಡಿಕೆ ಹೆಚ್ಚಾಗಬಹುದು. ಅದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು 1,414 ಟನ್ ನಷ್ಟು ಆಕ್ಸಿಜನ್ ಮೇ ನಲ್ಲಿ ಪ್ರತಿ ದಿನ ಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ ಎಂದು ವಿವರಿಸಿದರು.

82% ಗುಣಮುಖ

ರಾಜ್ಯದಲ್ಲಿ ಈವರೆಗೆ 82.08% ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ 10,46,554 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಇಂತಹ ಸಕಾರಾತ್ಮಕ ಅಂಶಗಳ ಕಡೆಗೂ ಗಮನಹರಿಸಬೇಕು. ಕೇವಲ ಆತಂಕಗೊಂಡು ಕಡಿಮೆ ಲಕ್ಷಣ ಇರುವಾಗಲೂ ಆಸ್ಪತೆಗೆ ದಾಖಲಾದರೆ ತೀವ್ರ ಸೋಂಕಿನಿಂದ ಬಳಲುತ್ತಿರುವವರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳು, ವೈದ್ಯರು ಕಡಿಮೆ ಲಕ್ಷಣ ಇರುವವರನ್ನು ದಾಖಲಿಸಿಕೊಳ್ಳಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.