ರಾಜ್ಯ

ವೀಕೆಂಡ್ ಕರ್ಫ್ಯೂ ಯಶಸ್ವಿ,ಸದ್ಯದ ಮಾರ್ಗಸೂಚಿ ಮುಂದುವರಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ವೀಕೆಂಡ್ ಕರ್ಫ್ಯೂ ಎರಡನೇ ದಿನ ರಾಜ್ಯದಲ್ಲಿ ಯಶಸ್ವಿಯಾಗುತ್ತಿದೆ. ಜನರು ಸ್ವಯಂಪ್ರೇರಣೆಯಿಂದ ಓಡಾಟ ಕಡಿಮೆ ಮಾಡಿದ್ದು ಕೊರೋನಾ ಸೋಂಕು ತಡೆಗೆ ಇದರಿಂದ ಬಹಳಷ್ಟು ಸಹಕಾರಿಯಾಗಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವೀಕೆಂಡ್ ಕರ್ಫ್ಯೂ ಯಶಸ್ವಿ,ಸದ್ಯದ ಮಾರ್ಗಸೂಚಿ ಮುಂದುವರಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ
Published On :

ಬೆಂಗಳೂರು: ವೀಕೆಂಡ್ ಕರ್ಫ್ಯೂ ಎರಡನೇ ದಿನ ರಾಜ್ಯದಲ್ಲಿ ಯಶಸ್ವಿಯಾಗುತ್ತಿದೆ. ಜನರು ಸ್ವಯಂಪ್ರೇರಣೆಯಿಂದ ಓಡಾಟ ಕಡಿಮೆ ಮಾಡಿದ್ದು ಕೊರೋನಾ ಸೋಂಕು ತಡೆಗೆ ಇದರಿಂದ ಬಹಳಷ್ಟು ಸಹಕಾರಿಯಾಗಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂ ವಿಸ್ತರಿಸುವ ಕುರಿತು ನಿನ್ನೆ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪ್ರಸ್ತಾಪ ಬಂದಿಲ್ಲ. ಆ ಬಗ್ಗೆ ಊಹಾಪೋಹ ಹಬ್ಬಿಸುವುದು ಬೇಡ, ಸದ್ಯಕ್ಕೆ ಸರ್ಕಾರದ ಮಾರ್ಗಸೂಚಿಯಂತೆ ಯಥಾಸ್ಥಿತಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಪ್ರಮಾಣವನ್ನು 800 ಮೆಟ್ರಿಕ್ ಟನ್ ಗೆ ಹೆಚ್ಚಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ಕಡಿಮೆಯಾಗಲಿದೆ. ನಮ್ಮ ಅಧಿಕಾರಿಗಳು ಕೂಡ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.