ರಾಜ್ಯ

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ ಆರೋಪ: ನಗರದ ಪ್ರತಿಷ್ಠಿತ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡುವಲ್ಲಿ ಕಳ್ಳಾಟ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. 

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ಸಿಇಒ ಡೇವಿಡ್, ಶಸ್ತ್ರಚಿಕಿತ್ಸೆಯ ಮುಖ್ಯಸ್ಥೆ ಕಲ್ಪನಾ, ವೈದ್ಯಕೀಯ ಅಧೀಕ್ಷಕರಾದ ಶಾಂತಾ, ಸಹನಾ, ಆರ್.ಚಂದನಾ ಹಾಗೂ ಮಂಜುಳ ಎಂಬುವವರು ಸೇರಿ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 

ಈ ನಡುವೆ ಪ್ರಕರಣ ಸಂಬಂಧ ಮೂವರಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಟೆಯವರು ಹೇಳಿದ್ದಾರೆ. 

ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಅರೋಗ್ಯಾಧಿಕಾರಿ ಡಾ.ನಾಗೇಂದ್ರ ಕುಮಾರ್ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಬಿಬಿಎಂಪಿ ಕೋಟಾದಡಿ ಅಪೋಲೋ ಆಸ್ಪತ್ರೆಗೆ ಏ.14ರಂದು ಸೂರ್ಯ ಏ.20ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಅರೋಪಿಗಳು ಏ.24ರವರೆಗೂ ಸೂರ್ಯ ನಾರಾಯಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ಬಿಬಿಎಂಪಿಗೆ ಮಾಹಿತಿ ನೀಡಿ ಇತರೆ ಕೋವಿಡ್ ರೋಗಿಗಳಿಗೆ ಬೇಡ್ ನೀಡದೇ ದುರುಪಯೋಗಪಡಿಸಿಕೊಂಡಿದ್ದಾರೆ. 

ಅಲ್ಲದೆ, ರಾಜಾರಾಂ ಎಂಬ ಬಿಬಿಎಂಪಿ ಕೋಟಾದಡಿಯೇ ಸೋಂಕಿತರೊಬ್ಬರು ಇದೇ ಆಸ್ಪತ್ರೆಗೆ ಏ.16 ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಏ.20ರಂದು ಮೃತಪಟ್ಟಿದ್ದರು. ಮೃತರ ಕುಟುಂಬಸ್ಥರ ಬಳಿ ಆಸ್ಪತ್ರೆ ಆಡಳಿತ ಮಂಡಳಿ ರೂ.2.49 ಲಕ್ಷ ಕಟ್ಟಿಸಿಕೊಂಡಿದ್ದು, ವಂಚನೆ ಮಾಡಿದೆ. 

ಇಷ್ಟು ಸುಮ್ಮನಾಗದ ವಂಚಕರು ವ್ಯಕ್ತಿ ಮೃತಪಟ್ಟು 4 ದಿನ ಬಳಿಕವೂ ಏ.25ರವರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಎಂಬ ಮಾಹಿತಿ ನೀಡಿ ವಂಚನೆ ಮಾಡಿದ್ದಾರೆ. 

ಅದೇ ರೀತಿ ಕಾಶಿನಾಥ್ ಎಂಬ ಕೋವಿಡ್ ರೋಗಿ ಏ.17ರಂದು ಚಿಕಿತ್ಸೆಗೆ ದಾಖಲಾಗಿ ಏ.22 ರಂದು ಡಿಸ್ಚಾರ್ಜ್ ಆಗಿದ್ದರು. ಆದರೂ ಬಿಬಿಎಂಪಿಗೆ ರೋಗಿ ಇನ್ನೂ ಇದ್ದಾರೆಂದು ವರದಿ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ತಮ್ಮ ವಿರುದ್ಧ ಆರೋಪಗಳು ಕೇಳಿ ಬಂದು, ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿದರೂ ಯಾರೊಬ್ಬರೂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಂಪರ್ಕಕ್ಕೆ ಸಿಕ್ಕಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.