ಮಡಿಕೇರಿ ನಗರಸಭೆ ಚುನಾವಣೆ: ಕೊರೋನಾ ನಡುವೆಯೂ ಶೇ. 70 ರಷ್ಟು ಮತದಾನ
ಸುಮಾರು 7 ವರ್ಷಗಳ ನಂತರ ಮಡಿಕೇರಿ ನಗರಸಭೆಯ 23 ವಾರ್ಡ್ಗಳಿಗೆ ಮಂಗಳವಾರ ಚುನಾವಣೆ ನಡೆದಿದ್ದು, ಕೊರೋನಾ ಆತಂಕದ ನಡುವೆಯೂ ಮತದರಾರರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಹಕ್ಕು ಚಲಾಯಿಸಿದ್ದು...

ಮಡಿಕೇರಿ: ಸುಮಾರು 7 ವರ್ಷಗಳ ನಂತರ ಮಡಿಕೇರಿ ನಗರಸಭೆಯ 23 ವಾರ್ಡ್ಗಳಿಗೆ ಮಂಗಳವಾರ ಚುನಾವಣೆ ನಡೆದಿದ್ದು, ಕೊರೋನಾ ಆತಂಕದ ನಡುವೆಯೂ ಮತದರಾರರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಹಕ್ಕು ಚಲಾಯಿಸಿದ್ದು, ನಾಲ್ಕು ಗಂಟೆಯವರೆಗೆ ಶೇ. 70ರಷ್ಟು ಮತದಾನವಾಗಿದೆ.
ಒಟ್ಟು 23 ವಾರ್ಡ್ಗಳಲ್ಲಿ 108 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 26,887 ಮತದಾರರಿದ್ದಾರೆ ಎಂದು ತಹಶಿಲ್ದಾರ್ ಮಹೇಶ್ ಅವರು ತಿಳಿಸಿದ್ದಾರೆ.
27 ಮತಗಟ್ಟೆಗಳಲ್ಲಿ 6 ಸೂಕ್ಷ್ಮ, 3 ಅತಿಸೂಕ್ಷ್ಮ ಮತ್ತು 18 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಅನೇಕ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಸ್ಥಳದಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಕೆಲವು ಮತದಾನ ಕೇಂದ್ರಗಳಲ್ಲಿ ಇವಿಎಂನಲ್ಲಿನ ತೊಂದರೆ ಕಂಡುಬಂದಿರುವುದು ವರದಿಯಾಗಿದೆ. ಇದು ಮತದಾನ ಪ್ರಕ್ರಿಯೆಯನ್ನು ಸುಮಾರು ಒಂದು ಗಂಟೆ ವಿಳಂಬಗೊಳಿಸಿತು. ಆದಾಗ್ಯೂ, ತೊಂದರೆಗಳನ್ನು ಬೇಗನೆ ಸರಿಪಡಿಸಲಾಯಿತು.
ಇನ್ನು ಕೊರೋನಾ ಸೋಂಕಿತ 22 ಮತದರಾರು ಪಿಪಿಇಕಿಟ್ ಧರಿಸಿ ಮತ ಚಲಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


