ರಾಜ್ಯ

ಮಾಜಿ ಸಂಸದ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಗೆ ಕೊರೋನಾ ಪಾಸಿಟಿವ್

ಮಾಜಿ ಸಂಸದ ದಿ. ಸುರೇಶ್ ಅಂಗಡಿಯವರ ಪತ್ನಿ, ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಮಾಜಿ ಸಂಸದ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಗೆ ಕೊರೋನಾ ಪಾಸಿಟಿವ್
ಮಂಗಳಾ ಅಂಗಡಿ
Published On :

ಬೆಳಗಾವಿ: ಮಾಜಿ ಸಂಸದ ದಿ. ಸುರೇಶ್ ಅಂಗಡಿಯವರ ಪತ್ನಿ, ಬೆಳಗಾವಿ ಲೋಕಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಬಗ್ಗೆ ಮಂಗಳಾ ಅಂಗಡಿ ತಮ್ಮ ಟ್ವಿಟ್ಟರ್ ಖತೆಯಲ್ಲಿ ಬರೆದುಕೊಂಡಿದ್ದು "ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗುತ್ತಿದ್ದೇನೆ.

"ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಲು ವಿನಂತಿಸಿಕೊಳ್ಳುತ್ತೇನೆ.
 ಎಂದಿದ್ದಾರೆ.

ಮಂಗಳಾ ಅಂಗಡಿ ಪತಿ, ಮಾಜಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೊರೋನಾ ಸೋಂಕಿನಿಂದ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.