ರಾಜ್ಯ

ಕೊರೋನಾ ಲಸಿಕೆ: ವಲಯವಾರು ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಸಿದ್ಧತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ

ಬಿಬಿಎಂಪಿ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1ರಿಂದ ಕೋವಿಡ್‌ ಲಸಿಕೆ ನೀಡಲು ಬುಧವಾರದಿಂದ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಸಿದ್ಧತೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಪರಿಶೀಲನೆ ನಡೆಸಿದರು.

ಕೊರೋನಾ ಲಸಿಕೆ: ವಲಯವಾರು ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಸಿದ್ಧತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1ರಿಂದ ಕೋವಿಡ್‌ ಲಸಿಕೆ ನೀಡಲು ಬುಧವಾರದಿಂದ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಸಿದ್ಧತೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಪರಿಶೀಲನೆ ನಡೆಸಿದರು. 

ವಲಯವಾರು ಮುಖ್ಯಸ್ಥರು, ವಿಶೇಷ ಆಯುಕ್ತರು ಹಾಗೂ ತಜ್ಞರೊಂದಿಗೆ ಸಭೆ ನಡೆಸಿದ ಗೌರವ್ ಗುಪ್ತಾ ಅವರು, ಕೇಂದ್ರ ಸರ್ಕಾರದ ಸೂಚನೆ ಅನ್ವಯ ಸರ್ಕಾರ ಎಲ್ಲಾ ಲಸಿಕೆ ಕೇಂದ್ರಗಳಲ್ಲೂ 18 ವರ್ಷ ಮೇಲ್ಪಟ್ಟ ಎಲ್ಲಾ ಕೊರೋನಾ ಮುಂಚೂಣಿ ಹೋರಾಟಗಾರರು, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಬೇಕು ಎಂದೂ ಸೂಚನೆ ನೀಡಿದ್ದಾರೆ. 

ಈ ಬಾರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಸರ್ಕಾರದ ವತಿಯಿಂದ ಕೋವಿಡ್‌ ಲಸಿಕೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಲಸಿಕೆ ಪೂರೈಸುವುದಿಲ್ಲ. ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಂಗಳು ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಬೇಕು. ಸರ್ಕಾರ ನಿಗದಿಪಡಿಸಿದ ದರದಲ್ಲೇ ವಿತರಣೆ ಮಾಡಬೇಕು’ ಎಂದು ತಿಳಿಸಿದ್ದಾರೆ. 

ನಗರದ ವ್ಯಾಪ್ತಿಯಲ್ಲಿ ಕೋವಿಡ್‌ ಪತ್ತೆ ಪರೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಿದ 24 ಗಂಟೆಗಳೊಳಗೆ ವರದಿ ನೀಡುವಂತೆ ಎಲ್ಲ ಪ್ರಯೋಗಾಲಯಗಳಿಗೂ ಸೂಚನೆ ನೀಡಬೇಕು. ಮಾದರಿಗಳ ಸಂಗ್ರಹದ ಸಮಯದಲ್ಲಿ ವಿಳಾಸ, ಮೊಬೈಲ್‌ ಸಂಖ್ಯೆ ಮತ್ತು ಪಿನ್‌ ಕೋಡ್‌ ನಿಖರವಾಗಿ ನಮೂದಿಸುವಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಖಾಸಗಿ ಪ್ರಯೋಗಾಲಯಗಳು ವರದಿಯನ್ನು ತಡವಾಗಿ ಐಸಿಎಂಆರ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿರುವುದರಿಂದ ‘ಬಿಯು’ ಸಂಖ್ಯೆ ಸೃಜಿಸುವುದು ವಿಳಂಬವಾಗುತ್ತಿದೆ. ಇದು ಕೋವಿಡ್‌ ರೋಗಿಗಳು ಆಸ್ಪತ್ರೆ ತಡವಾಗಿ ದಾಖಲಾಗಲು ಕಾರಣವಾಗುತ್ತಿದೆ. ಈ ವಿಚಾರದಲ್ಲಿ ಖಾಸಗಿ ಪ್ರಯೋಗಾಲಯಗಳಿಗೆ ಸ್ಪಷ್ಟವಾದ ಸೂಚನೆಗಳನ್ನು ನೀಡಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.