ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ
ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.
ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.
ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


