ಆಮ್ಲಜನಕ ಸರಬರಾಜು ಆಗದಿದ್ದರೆ, 2-3 ದಿನಗಳಲ್ಲಿ ಸಮಸ್ಯೆ: ಮೈಸೂರು ಡಿಸಿ ರೋಹಿಣಿ ಆತಂಕ
ಮೈಸೂರಿಗೆ ಆಮ್ಲಜನಕ (ಆ್ಯಕ್ಸಿಜನ್) ಸರಬರಾಜು ಆಗದಿದ್ದರೆ ಇನ್ನೂ 2-3 ದಿನಗಳಲ್ಲಿ ಸಮಸ್ಯೆಯಾಗಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆತಂಕ ವ್ಯಕ್ತಪಡಿಸಿದ್ದಾರೆ.

ಮೈಸೂರು: ಮೈಸೂರಿಗೆ ಆಮ್ಲಜನಕ (ಆ್ಯಕ್ಸಿಜನ್) ಸರಬರಾಜು ಆಗದಿದ್ದರೆ ಇನ್ನೂ 2-3 ದಿನಗಳಲ್ಲಿ ಸಮಸ್ಯೆಯಾಗಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಪ್ಲ್ಯಾಂಟ್'ಗೆ ಅನುಮತಿ ಸಿಕ್ಕಿದೆ. ಆದರೆ, ಅದಕ್ಕೆ ಕನಿಷ್ಠ 25 ದಿನ ಬೇಕು. ನಮಗೆ ತುರ್ತಾಗಿ ಪರ್ಯಾಯವಾಗಿ ಆಕ್ಸಿಜನ್ ಬೇಕಾಗಿದೆ. ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ವಾರಾಂತ್ಯದಲ್ಲಿ 50 ವೆಂಟಿಲೇಟರ್ ನೀಡುವ ಭರವಸೆ ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇದೆ. ವಾರಾಂತ್ಯದಲ್ಲಿ ಮತ್ತಷ್ಟು ವೆಂಟಿಲೇಟರ್ ಬೆಡ್ ಗಳು ಸಿಗಲಿವೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಒಂದೇ ದಿನ 1500 ಪಾಸಿಟಿವ್ ಬರಲು ಹಳೆಯ ಅಂಕಿ ಅಂಶಗಳೆಲ್ಲಾ ಸೇರಿ ನೀಡಿದ್ದೇ ಕಾರಣವಾಗಿದೆ. ನಾವು 700 ಆಸುಪಾಸಿನಲ್ಲಿ ಇದ್ದೇವೆ. ಅಂಕಿ ಅಂಶಗಳು ಎರಡು ದಿನದ್ದು ಸೇರಿದಾಗ ಈ ರೀತಿ ಹೆಚ್ಚಾದಂತೆ ಕಾಣುತ್ತದೆ. ಸಾವಿರ ದಾಟಿದೆ ಎಂದು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


