ರಾಜ್ಯ

ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ನಿಯಂತ್ರಣಕ್ಕೆ ಸಂಬಂಧಿಸಿ ಸಚಿವರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ತೀವ್ರವಾಗಿ ಕಾಡುತ್ತಿದೆ. ನಿತ್ಯವೂ ಅನೇಕ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸೋಂಕು ಹೆಚ್ಚಾಗಿ ಆರೋಗ್ಯ ಸಮಸ್ಯೆ ಹೊಂದಿರುವವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದುತ್ತಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ನಿಯಂತ್ರಣಕ್ಕೆ ಸಂಬಂಧಿಸಿ ಸಚಿವರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಇಂದು ಬೆಂಗಳೂರಿನಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
Published On :

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ತೀವ್ರವಾಗಿ ಕಾಡುತ್ತಿದೆ. ನಿತ್ಯವೂ ಅನೇಕ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸೋಂಕು ಹೆಚ್ಚಾಗಿ ಆರೋಗ್ಯ ಸಮಸ್ಯೆ ಹೊಂದಿರುವವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದುತ್ತಿದ್ದಾರೆ.

ಸರ್ಕಾರ ಈಗಾಗಲೇ 14 ದಿನಗಳ ಕೊರೋನಾ ಕರ್ಫ್ಯೂವನ್ನು ರಾಜ್ಯಾದ್ಯಂತ ಹೇರಿದೆ. ಮೊನ್ನೆ ರಾತ್ರಿ 9 ಗಂಟೆಯಿಂದ ಜಾರಿಗೆ ಬಂದಿದ್ದು, ಸದ್ಯದ ಕೊರೋನಾ ಪರಿಸ್ಥಿತಿ, ಕರ್ಫ್ಯೂ ಜಾರಿಯ ಕ್ರಮಗಳ ಬಗ್ಗೆ ಕೋವಿಡ್ ಪರಾಮರ್ಶೆ ಸಭೆಯನ್ನು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಪುಟದ ಕೆಲವು ಸಚಿವರು, ಅಧಿಕಾರಿಗಳ ಜೊತೆ ಮತ್ತೊಂದು ಸಭೆ ನಡೆಸಿದ್ದಾರೆ.

ಇಂದಿನ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ ಎನ್ ಅಶ್ವಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಆರೋಗ್ಯ ಸಚಿವ ಡಾ ಕೆ ಸುಧಾಕರ್, ಭೈರತಿ ಬಸವರಾಜು, ಅಧಿಕಾರಿಗಳು ಭಾಗವಹಿಸಿದ್ದಾರೆ.

ಕರ್ನಾಟಕದಲ್ಲಿ ನಿನ್ನೆ ಅತಿ ಹೆಚ್ಚು ಕೋವಿಡ್ ಸೋಂಕಿನ ಕೇಸುಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 39 ಸಾವಿರದ 047 ಮಂದಿಯಲ್ಲಿ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 14.39 ಲಕ್ಷಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 15 ಸಾವಿರ ದಾಟಿದೆ. ನಿನ್ನೆ ಒಂದೇ ದಿನ 229 ಮಂದಿ ಕೊರೋನಾ ಸೋಂಕಿಗೆ ಸಂಬಂಧಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರು ನಗರವೊಂದರಲ್ಲಿಯೇ 22 ಸಾವಿರದ 596 ಸೋಂಕಿತರು ನಿನ್ನೆ ಪತ್ತೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.