ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ
ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಕನಿಷ್ಠ ಒಂದು ದಿನ ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್...

ಬೆಂಗಳೂರು: ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಕನಿಷ್ಠ ಒಂದು ದಿನ ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಸೂಚಿಸಿ ಆದೇಶಿಸಿದ್ದಾರೆ.
ಕೋವಿಡ್ -19 ರ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಹೇರಿದ್ದು, ಈ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅಗ್ರಿವಾರ್ ರೂಮ್ ಅನ್ನು ಸೇತುವಂತೆ ಕಾರ್ಯನಿರ್ವಹಿಸಲು ಆರಂಭಿಸಲಾಗಿದೆ.
ಸರ್ಕಾರದ ಲಾಕ್ಡೌನ್ ಮಾರ್ಗಸೂಚಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ( outside Containment Zone) ವಿನಾಯಿತಿ ನೀಡಲಾಗಿದೆ. ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಚಟುವಟಿಕೆಗಳು , ಸಂಬಂಧಿತ ಮಳಿಗೆಗಳು ಮತ್ತು ಗೋದಾಮುಗಳು ಸೇರಿದಂತೆ ಬಾಡಿಗೆ ಆದರಿತ ಸೇವಾ ಕೇಂದ್ರಗಳು, ಯಂತ್ರೋಪಕರಣಗಳಿಗೆ ವಿನಾಯಿತಿ ನೀಡಲಾಗಿದೆ. ಕೃಷಿ ಸಂಬಂಧಿತ ಚಟುವಟಿಕೆಗಳು, ಮೀನುಗಾರಿಕೆ, ಕುಕ್ಕುಟ, ಜಾನುವಾರು ಹಾಗೂ ಹೈನುಗಾರಿಕೆ ಇತ್ಯಾದಿಗಳಿಗೆ ವಿನಾಯಿತಿ ನೀಡಲಾಗಿದೆ.
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ, ಜಿಲ್ಲೆಗಳಲ್ಲಿ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಗೊಂದಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಲಹೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರುಗಳು ಹಾಗೂ ತಾಲ್ಲೂಕು ಮಟ್ಟದಲ್ಲಿ ವಾರದಲ್ಲಿ ಒಂದು ದಿನ ಸಭೆ ಆಯೋಜಿಸಿ, ರೈತರು ಕೋವಿಡ್ -19 ನಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಳಬಹುದಾದ ಪ್ರಶ್ನೆಗಳಿಗೆ ಸೂಕ್ತ ಸಲಹೆ, ಪರಿಹಾರ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದಾದರು ಪ್ರಶ್ನೆಗಳಿಗೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಸೂಪರಿಟೆಂಡೆಂಟ್ ಆಫ್ ಪೊಲೀಸ್‌ರವರ ಗಮನಕ್ಕೆ ತಂದು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಸಭೆ ಆಯೋಜಿಸುವಾಗ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್ -19 ರ ಪ್ರಸರಣವನ್ನು ನಿಯಂತ್ರಿಸಲು ನಿಗಧಿಪಡಿಸಿರುವ ಮಾರ್ಗಸೂಚಿಯನ್ವಯ ಸಾಮಾಜಿಕ ಅಂತರ ಹಾಗೂ ಇನ್ನಿತರೆ ಕೋವಿಡ್ -19 ರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೃಷಿ ನಿರ್ದೇಶಕರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


