ಬೆಳ್ಳಂಬೆಳಗ್ಗೆ ಸೈಕಲ್ ಏರಿದ ಸಿಎಂ ಬೊಮ್ಮಾಯಿ:'ಚೀರ್ ಫಾರ್ ಇಂಡಿಯಾ' ಸೈಕಲ್ ಜಾಥಾಕ್ಕೆ ಚಾಲನೆ
ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್ ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.

ಬೆಂಗಳೂರು: ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್ ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.
ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿ "Cheer 4 India, be like an Olympian - Cycling ride" ಘೋಷವಾಕ್ಯದಡಿ ಆಯೋಜಿಸಿದ್ದ “ಸೈಕಲ್ ರೈಡ್' ಗೆ ಚಾಲನೆ ನೀಡಿದರು. ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಸೈಕಲ್ ರ್ಯಾಲಿ ಇದಾಗಿತ್ತು.
ಈ ವೇಳೆ ಸೈಕಲ್ ಏರಿ ಜಾಥಾ ಹೋಗಿ ಬಂದರು. ಮುಖ್ಯಮಂತ್ರಿಗಳಿಗೆ ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಮೊದಲಾದವರು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರತಿ ವಿಷಯ, ಅಂಶಕ್ಕೂ ಸೂಕ್ಷ್ಮವಾಗಿ ಸ್ಪಂದಿಸುವ ಪ್ರಧಾನ ಮಂತ್ರಿ ಮೋದಿ ಭಾರತ ಮತ್ತು ಭಾರತೀಯತೆಗೆ ಸದಾ ತುಡಿಯುತ್ತಾರೆ, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಪೂರ್ತಿ ತುಂಬುತ್ತಿದ್ದಾರೆ ಎಂದು ಹೇಳಿದರು.
ಸ್ವಚ್ಛ ಭಾರತದಿಂದ ಹಿಡಿದು ಪ್ರತಿಯೊಂದು ಕಾರ್ಯಕ್ರಮದಲ್ಲಿ ಮೋದಿಯವರ ಸೂಕ್ಷ್ಮ ಸಂವೇದನೆ ಎದ್ದು ಕಾಣುತ್ತದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಜೀತೋ ಇಂಡಿಯಾ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸುತ್ತಿದ್ದಾರೆ. ಅದರ ಭಾಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೈಕಲ್ ರ್ಯಾಲಿಯಲ್ಲಿ 56 ಸಾವಿರ ಮಂದಿ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ನಾನು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಯುವ ಸಮೂಹ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ಉಂಟುಮಾಡಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


