ಮೇಕೆದಾಟು ಯೋಜನೆ ಕುರಿತು ಶೀಘ್ರದಲ್ಲೇ ಸರ್ವ ಪಕ್ಷ ಸಭೆ ಆಯೋಜನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ಕುರಿತು ಶೀಘ್ರದಲ್ಲಿ ಸರ್ವ ಪಕ್ಷ ಸಭೆ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ಕುರಿತು ಶೀಘ್ರದಲ್ಲಿ ಸರ್ವ ಪಕ್ಷ ಸಭೆ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ನೆಲ ಮತ್ತು ಜಲಕ್ಕೆ ಸಂಬಂಧಿಸಿದ ಸಮಸ್ಯೆಗೆ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು, ಪ್ರತಿಯೊಬ್ಬರನ್ನು ಜೊತೆಗೆ ತೆಗೆದುಕೊಂಡು ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು, ಮುಂದಿನ ದಿನಗಳಲ್ಲಿ ಸರ್ಕಾರ ಪಕ್ಷ ಸಭೆ ಆಯೋಜಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ವಿಚಾರದಲ್ಲಿ ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೋರಾಟವನ್ನು ಅರಿತಿರುವುದಾಗಿ ತಿಳಿಸಿದರು.ಮೇಕೆದಾಟು ಅಣೆಕಟ್ಟು ಕೆಲಸಗಳು ಆರಂಭಿಸುತ್ತಿರುವುದಾಗಿ ಕರ್ನಾಟಕ ಹೇಳುತ್ತಿದ್ದಂತೆ ಉಭಯ ರಾಜ್ಯಗಳ ನಡುವಣ ವಿವಾದ ತಲೆದೋರಿತು. ಯೋಜನೆ ವಿರುದ್ಧ ತಮಿಳುನಾಡು ಮತ್ತು ಪುದುಚೇರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ವ್ಯಕ್ತವಾಗುತ್ತಿದೆ.
400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಜೊತೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವುದಕ್ಕಾಗಿ 4.75 ಟಿಎಂಸಿ ನೀರನ್ನು ಬಳಸಿಕೊಳ್ಳುವ ಉದ್ದೇಶದೊಂದಿಗೆ ರಾಮನಗರ ಜಿಲ್ಲೆ ಮೇಕೆದಾಟುವಿನಲ್ಲಿ 9 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಾಶಯ ನಿರ್ಮಿಸಲು ಕರ್ನಾಟಕ ಸರ್ಕಾರ ಈಗಾಗಲೇ ವಿಸ್ಕೃತ ಯೋಜನಾ ವರದಿಯನ್ನು ತಯಾರಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಯನ್ನು ಎದುರು ನೋಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


