ರಾಜ್ಯ

ಕೊರೋನಾ 3ನೇ ಅಲೆ ತಡೆಯಲು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಿದ್ದರಾಮಯ್ಯ

ಸಂಭಾವ್ಯ ಕೊರೋನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಗ್ರಹಿಸಿದ್ದಾರೆ.

ಕೊರೋನಾ 3ನೇ ಅಲೆ ತಡೆಯಲು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಮೈಸೂರು: ಸಂಭಾವ್ಯ ಕೊರೋನಾ 3ನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಂಕ್ರಾಮಿಕ ರೋಗವನ್ನು ಒಬ್ಬ ವ್ಯಕ್ತಿ ನಿರ್ವಹಣೆ ಮಾಡುವುದು ಕಷ್ಟರವಾಗಲಿದೆ, ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರಗತಿಯಲ್ಲಿ ಸಂಪುಟ ರಚನೆ ಮಾಡಬೇಕೆಂದು ಹೇಳಿದ್ದಾರೆ. 

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಈ ಎರಡೂ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಸರ್ಕಾರ ನಿರ್ಬಂಧ ಹೇರಬೇಕೆಂದು ಆಗ್ರಹಿಸಿದ್ದಾರೆ. 

ಇದೇ ವೇಳೆ ಕಳೆದ ವರ್ಷ ಪ್ರವಾಹ ಪೀಡಿತರಿಗೆ ಘೋಷಣೆ ಮಾಡಿದ್ದ ರೂ.10,000 ಪರಿಹಾರ ಹಣವನ್ನು ನೀಡದಿರುವುದಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.