ರಾಜ್ಯ

ರಾಜಕಾರಣಿಗಳು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚು ಒತ್ತು ನೀಡಬೇಕು: ಪ್ರತಾಪ್ ಸಿಂಹ

ನಮ್ಮ ರಾಜಕಾರಣಿಗಳು ಮೇಕೆದಾಟು ಯೋಜನೆ ಕುರಿತು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ.

ರಾಜಕಾರಣಿಗಳು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚು ಒತ್ತು ನೀಡಬೇಕು: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ
Published On :

ಬೆಂಗಳೂರು: ನಮ್ಮ ರಾಜಕಾರಣಿಗಳು ಮೇಕೆದಾಟು ಯೋಜನೆ ಕುರಿತು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ. 

ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸಿ ಆ.5ಕ್ಕೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆಂದು ಅಣ್ಣಾಮಲೈ ಅವರು ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಿ ವರದಿ ಸಲ್ಲಿಕೆ ಮಾಡಲು ತಿಳಿಸಿದೆ. ತಮಿಳುನಾಡಿನಲ್ಲಿ ಅಣ್ಣಾಮಲೈ ಅವರು ಅಲ್ಲಿನ ರಾಜಕೀಯಕ್ಕಾಗಿ ಉಪವಾಸ ಮಾಡುತ್ತಿದ್ದಾರೆ. ಅದನ್ನು ನಾವು ಬೇಡ ಎಂದು ಹೇಳಲು ಅಗುವುದಿಲ್ಲ. ಆದರೆ, ಈ ಬಗ್ಗೆ ನಮ್ಮಲ್ಲಿ ಹೆಚ್ಚಿನ ಚರ್ಚೆ ಬೇಡ. ರಾಜಕಾರಣಿಗಳು ಹೇಳಿಕೆ ಕೊಡುವುದನ್ನು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಒತ್ತು ನೀಡಬೇಕೆಂದು ಹೇಳಿದ್ದಾರೆ. 

ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ಬಳಿ ರಾಜ್ಯದ ಪಾಲು ಕೇಳಲಾರರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬೊಮ್ಮಾಯಿಯವರು ಮನೆಯಲ್ಲಿದ್ದುಕೊಂಡೇ ಅಧಿಕಾರ ನಡೆಸುವುದನ್ನು ಕಂಡಿದ್ದಾರೆ. ಅವರ ತಂದೆ ಸಹ ಮುಖ್ಯಮಂತ್ರಿ ಆಗಿದ್ದವರು. ಸ್ವತಃ ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿಯಾಗಿದ್ದಾರೆ. ಗೃಹ ಸಚಿವರಾಗಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರು ಎಲ್ಲವನ್ನೂ ಚೆನ್ನಾಗಿ ನಡೆಸಿಕೊಂಡು ಹೋಗಲಿದ್ದಾರೆಂದು ತಿರುಗೇಟು ನೀಡಿದ್ದಾರೆ. 

ಸಿದ್ದರಾಮಯ್ಯಗೆ ಎಲ್ಲಾ ಗೊತ್ತಿದ್ದೂ ರಾಜಕೀಯಕ್ಕಾಗಿ ಮಾತನಾಡುತ್ತಾರೆ. ಹಾಗಾಗಿ ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿರುವವರು. ಅವರಿಗೆ ಎಲ್ಲವೂ ಗೊತ್ತು. ಹೈವೆ ಕೆಲಸಕ್ಕೆ 95 ಸಾವಿರ ಕೋಟಿ ಹಣ ಕೊಟ್ಟಿರುವುದು ಮೋದಿ ಸರ್ಕಾರ. ಬೆಂಗಳೂರು ಮೈಸೂರು ಹೈವೆ ಅಭಿವೃದ್ಧಿಗಾಗಿ 8,096 ಕೋಟಿ ಹಣ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಮೋದಿ ಸರ್ಕಾರ. ರಾಜ್ಯಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ. ಸಿದ್ದರಾಮಯ್ಯ ಕೇವಲ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕೆಂದು ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.