ರಾಜ್ಯ

ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ನೂತನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ತೀರ್ಮಾನಿಸಲಾಗಿದೆ.

ಕೋವಿಡ್ ಟಾಸ್ಕ್ ಫೋರ್ಸ್ ಪುನರ್ ರಚಿಸಲು ನೂತನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ
Published On :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ನೂತನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್  ಟಾಸ್ಕ್ ಫೋರ್ಸ್ ಪುನರ್ ರಚಿಸಲು ತೀರ್ಮಾನಿಸಲಾಗಿದೆ.

ಎಲ್ಲ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ತೀರ್ಮಾನ ಕೈಗೊಳ್ಳಬೇಕು, ಪರಿಶೀಲನೆ ಬಳಿಕ ಪರಿಹಾರ ಕ್ರಮಗಳ ಅಗತ್ಯವಿದ್ದರೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಎಸ್ ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೂ ತೀರ್ಮಾನ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.