ರಾಜ್ಯ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಆ.5ರಂದು 'ಆಪ್' ನಾಯಕರಿಂದ ಉಪವಾಸ ಸತ್ಯಾಗ್ರಹ

ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ಆ.5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯದ ಆಮ್‌ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಆ.5ರಂದು 'ಆಪ್' ನಾಯಕರಿಂದ ಉಪವಾಸ ಸತ್ಯಾಗ್ರಹ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ಆ.5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯದ ಆಮ್‌ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಂದು ಆಮ್‌ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥ ಎಸ್.ವಿ.ಫಣಿರಾಜ್‌ ಅವರು, ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಆಗಸ್ಟ್‌ 5ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಭವಿಷ್ಯದಲ್ಲಿ ಭಾರೀ ತೊಂದರೆ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಮೇಕೆದಾಟು ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿಂದೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಅಧಿಕಾರದಲ್ಲಿದ್ದಾಗ ಕುಂಟು ನೆಪ ಹೇಳಿಕೊಂಡು ಈ ಯೋಜನೆಯನ್ನು ಮುಂದೂಡಿ, ಜನರನ್ನು ವಂಚಿಸಿವೆ. ಈಗಿನ ‘ಡಬಲ್ ಎಂಜಿನ್’ ಬಿಜೆಪಿ ಸರ್ಕಾರ ಕೂಡ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

ಭವಿಷ್ಯದ ದೃಷ್ಟಿಯಿಂದ ಮೇಕೆದಾಟು ಯೋಜನೆ ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು

12 ತಿಂಗಳ ಡೆಡ್‌ಲೈಟ್‌ ಇಟ್ಟುಕೊಂಡು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಗ್ರಹ. ನಾಡಿನ ಒಳಿತಿಗಾಗಿ ನಡೆಯುತ್ತಿರುವ ಹೋರಾಟವನ್ನು ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.