ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿದ ಬಗ್ಗೆ ಅಫಿಡವಿಟ್ ಸಲ್ಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಕೋವಿಡ್ -19 ಅನ್ನು ಉಲ್ಲೇಖಿಸಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ 2021 ರವರೆಗೆ ಮುಂದೂಡಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ರಾಜ್ಯ ಸಚಿವ ಸಂಪುಟದ...

ಬೆಂಗಳೂರು: ಕೋವಿಡ್ -19 ಅನ್ನು ಉಲ್ಲೇಖಿಸಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ 2021 ರವರೆಗೆ ಮುಂದೂಡಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ರಾಜ್ಯ ಸಚಿವ ಸಂಪುಟದ ನಿರ್ಧಾರ ಸಮರ್ಥಿಸುವ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಸಾಂವಿಧಾನಿಕ ಆದೇಶದ ಪ್ರಕಾರ, ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯುವ ಮುನ್ನ ಚುನಾವಣೆ ನಡೆಸದಿರುವುದರ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಧಾರ್ಮಿಕ ಸ್ಥಳಗಳಿಗೆ ಜನರು ಭೇಟಿ ನೀಡಲು ಅವಕಾಶ ನೀಡಿದೆ. ಆದರೆ ಮತಗಟ್ಟೆಗಳಿಗೆ ಬರಲು ಅವಕಾಶ ಇಲ್ಲ ಎಂದರೆ ಏನರ್ಥ? ಎಂದು ರಾಜ್ಯ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ. ಅಲ್ಲದೆ ಸಂವಿಧಾನದ ಆದೇಶವನ್ನು ಪಾಲಿಸದ ಏಕೈಕ ರಾಜ್ಯ ಇದು ಎಂದು ಆಕ್ರೋಶ ವ್ಯಕ್ತಪಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಡಿಸೆಂಬರ್ 2021 ರವರೆಗೆ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ರಾಜ್ಯ ಚುನಾವಣಾ ಆಯೋಗಕ್ಕೆ(ಎಸ್‌ಇಸಿ) ಚುನಾವಣೆ ಮುಂದೂಡಲು ಮನವಿ ಮಾಡಿದೆ ಎಂದು ಸರ್ಕಾರಿ ವಕೀಲರು ಸರ್ಕಾರದ ನಿರ್ಧಾರವನ್ನು ಕೋರ್ಟ್ ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


