ರಾಜ್ಯದಲ್ಲಿ ಕೊರೋನಾದಿಂದ 36 ಸಾವು: ಬೆಂಗಳೂರಿನಲ್ಲಿ 441 ಸೇರಿ ಇಂದು 1,805 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,805 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,805 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 36 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,741ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 441 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,29,781ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,854 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,54,222ಕ್ಕೆ ಏರಿಕೆಯಾಗಿದೆ. ಇನ್ನು 24,328 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,62,338 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,805 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.11ಕ್ಕೆ ಇಳಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


