ರಾತ್ರಿ ಕರ್ಫ್ಯೂ ಹಿನ್ನೆಲೆ: ಶನಿವಾರದಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಮೆಟ್ರೋ ಸೇವೆ
ಕೋವಿಡ್ -19 ಹರಡುವಿಕೆ ತಡೆಗಾಗಿ ಸರ್ಕಾರ ರಾತ್ರಿ 9 ಗಂಟೆಯಿಂದ ಕರ್ಫ್ಯೂ ವಿಧಿಸಿರುವುದರಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲೂ ಒಂದು ಗಂಟೆ ಕಡಿತ ಮಾಡಲಾಗಿದೆ

ಬೆಂಗಳೂರು: ಕೋವಿಡ್ -19 ಹರಡುವಿಕೆ ತಡೆಗಾಗಿ ಸರ್ಕಾರ ರಾತ್ರಿ 9 ಗಂಟೆಯಿಂದ ಕರ್ಫ್ಯೂ ವಿಧಿಸಿರುವುದರಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲೂ ಒಂದು ಗಂಟೆ ಕಡಿತ ಮಾಡಲಾಗಿದೆ. ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆ ಲಭ್ಯ ಇರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ ಎಂದು ಬಿಎಂಆರ್ ಸಿಎಲ್ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆಯಿಂದಲೇ ಈ ಬದಲಾವಣೆ ಜಾರಿಗೆ ಬರಲಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೂ ಮಾತ್ರ ರೈಲು ಸೇವೆ ಲಭ್ಯವಾಗಲಿದೆ ಎಂದು ನಮ್ಮ ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


