ಚಿತ್ರಕಲಾ ಪರಿಷತ್ತಿನಲ್ಲಿ 'ಬೆಂಗಳೂರು ಉತ್ಸವ'ಕ್ಕೆ ಚಾಲನೆ
ಕೊರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಸೂಕ್ತ ವೇದಿಕೆ, ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ರಾಜ್ಯ ಚಿತ್ರಕಲಾ ಪರಿಷತ್ ಆವರಣದಲ್ಲಿ...

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಕರಕುಶಲಕರ್ಮಿಗಳಿಗೆ ಸೂಕ್ತ ವೇದಿಕೆ, ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ರಾಜ್ಯ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಯೋಜಿಸಲಾಗಿದ್ದ 10 ದಿನಗಳ ಬೆಂಗಳೂರು ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಟಿ ಭೂಮಿ ಶೆಟ್ಟಿ ಅವರು, ಕೊರೋನಾ ಕಾಲದಲ್ಲಿ ಎಲ್ಲರೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಜನರು ಈ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.
ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್ 15 ರ ವರೆಗೆ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ.
ಕೋವಿಡ್ -19 ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


