ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1598 ಹೊಸ ಪ್ರಕರಣಗಳು ಪತ್ತೆ, 1914 ಚೇತರಿಕೆ, 20 ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1598 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿಂದು 1598 ಹೊಸ ಪ್ರಕರಣಗಳು ಪತ್ತೆ, 1914 ಚೇತರಿಕೆ, 20 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1598 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ. 

1914 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2857776ಕ್ಕೆ ಹೆಚ್ಚಾಗಿದೆ. ಸೋಂಕಿನಿಂದ ಇಂದು 20 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 36793ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23930 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.1.09 ರಷ್ಟಿದ್ದು, ಮರಣ ಪ್ರಮಾಣ ಶೇ. 1.25 ರಷ್ಟಿದೆ. ಬೆಂಗಳೂರಿನಲ್ಲಿ 348 ಹೊಸ ಪ್ರಕರಣ ಪತ್ತೆಯಾಗಿದ್ದು, 366 ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.