ಬಾಂಗ್ಲಾದೇಶಿಗಳ ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕದಲ್ಲಿ ಎನ್ಐಎ ಶೋಧಕಾರ್ಯಾಚರಣೆ
ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ.

ನವದೆಹಲಿ: ಮಾನವಕಳ್ಳಸಾಗಣೆಯಲ್ಲಿ ತೊಡಗಿದ್ದ ಬಾಂಗ್ಲಾದೇಶಿಗಳಿಗೆ ಹಾಗೂ ದಂಧೆಯ ಸಂತ್ರಸ್ತರಿಗೆ ನಕಲಿ ಗುರುತಿನ ಚೀಟಿ ದಾಖಲೆ ಸೃಷ್ಟಿಸುತ್ತಿದ್ದ ಪ್ರಕರಣದಲ್ಲಿ ಎನ್ಎಇಐ ಶೋಧಕಾರ್ಯಾಚರಣೆ ನಡೆಸಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಎರಡು ಪ್ರದೇಶದಲ್ಲಿ ಎನ್ಐಎ ಶೋಧಕಾರ್ಯಾಚರಣೆ ನಡೆದಿದೆ.
ರಾಮಮೂರ್ತಿ ನಗರದಲ್ಲಿನ ಬಾಡಿಗೆ ಮನೆಯಲ್ಲಿದ್ದ ಬಾಂಗ್ಲಾದೇಶದ 7 ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳಸಾಗಣೆ ಜಾಲದಿಂದ ಜೂನ್ ನಲ್ಲಿ ರಕ್ಷಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಜಾಲದ ಮೇಲೆ ಎನ್ಐಎ ದಾಳಿ ನಡೆದಿದೆ.
ನೌಕರಿ ಕೊಡಿಸುವ ಆಮಿಷವೊಡ್ಡಿ ಮಹಿಳೆಯರನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ಆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿಗರ ಕಾಯ್ದೆ, ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಎನ್ಐಎ ಪ್ರಕರಣವನ್ನು ಮರುದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದೆ. ಶೋಧಕಾರ್ಯಾಚರಣೆಯಲ್ಲಿ ದಾಖಲೆಗಳು, 6 ಡಿಜಿಟಲ್ ಡಿವೈಸ್ ಗಳು, ಹಾರ್ಡ್ ಡಿಸ್ಕ್ ಗಳು, ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


