ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1,186 ಹೊಸ ಪ್ರಕರಣ, 1,776 ಚೇತರಿಕೆ; 24 ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿಂದು 1,186 ಹೊಸ ಪ್ರಕರಣ, 1,776 ಚೇತರಿಕೆ; 24 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,186 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ  ಒಟ್ಟು ಸೋಂಕಿತರ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ. 

ಸೋಂಕಿನಿಂದ ಗುಣಮುಖರಾಗಿ  1,776 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2859552ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23, 316 ಸಕ್ರಿಯ ಪ್ರಕರಣಗಳು ಇರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೋವಿಡ್-19 ಸೋಂಕಿನಿಂದ ಇಂದು 24 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 36, 817ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 0.89 ರಷ್ಟಿದ್ದು, ಮರಣ ಪ್ರಮಾಣ ಶೇ. 2.02 ರಷ್ಟಿದೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣದಲ್ಲಿ ತೀವ್ರ ರೀತಿಯ ಇಳಿಕೆಯಾಗಿದ್ದು, 296 ಹೊಸ ಪ್ರಕರಣಗಳು ದೃಢಪಟ್ಟಿದೆ. 410 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.