ರಾಜ್ಯ

ಮೇಕೆದಾಟು ಯೋಜನೆ ಕುರಿತ ತಮಿಳುನಾಡಿನ ರಾಜಕಾರಣ ಸರಿಯಲ್ಲ: ಸಿಎಂ ಬೊಮ್ಮಾಯಿ

ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ವಿಚಾರದಲ್ಲಿ ತಮಿಳುನಾಡು ಮಾಡುತ್ತಿರುವ ರಾಜಕಾರಣ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಮೇಕೆದಾಟು ಯೋಜನೆ ಕುರಿತ ತಮಿಳುನಾಡಿನ ರಾಜಕಾರಣ ಸರಿಯಲ್ಲ: ಸಿಎಂ ಬೊಮ್ಮಾಯಿ
ಚಾಮುಂಡೇಶ್ವರಿ ದೇವಾಲಯದಲ್ಲಿ ಸಿಎಂ ಬೊಮ್ಮಾಯಿ
Published On :

ಮೈಸೂರು: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ವಿಚಾರದಲ್ಲಿ ತಮಿಳುನಾಡು ಮಾಡುತ್ತಿರುವ ರಾಜಕಾರಣ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ತದನಂತರ ಬೊಮ್ಮಾಯಿಯವರು ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮೇಕೆದಾಟು ನದಿ ನೀರು ಹಂಚಿಕೆ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ನೀರಿನ ರಾಜಕಾರಣ ಮೊದಲಿನಿಂದಲೂ ಇದೆ. ಕಾವೇರಿ ನದಿ ನೀರು ಹಂಚಿಕೆಯ ವಿಚಾರ ಮುಂದಿಟ್ಟುಕೊಂಡು ಎಷ್ಟೋ ಪಕ್ಷಗಳು ಅಧಿಕಾರಕ್ಕೆ ಬಂದು ಹೋಗಿವೆ. ತಮಿಳುನಾಡಿನವರು ಏನೇ ಹೇಳಿದರು ನಾವು ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ. 

ಕಾವೇರಿ ಕೊಳ್ಳದಲ್ಲಿ ಲಭ್ಯವಾಗುವ ಗರಿಷ್ಠ ಪ್ರಮಾಣದ ನೀರಿನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ತಯಾರಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನ ಭೇಟಿ ಮಾಡುತ್ತೇನೆ. ಸುಪ್ರೀಂಕೊರ್ಟ್ ನೀಡಿರುವ ತೀರ್ಪು ಕಾನೂನಾತ್ಮಕ ವಾಗಿ ನಮಗೆ ಇರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತೇನೆ. ಕಾನೂನು ತಜ್ಞರ ಜೊತೆಗೂ ಚರ್ಚೆ ನಡೆಸುತ್ತೇನೆ. ನಮ್ಮ ನೀರು ನಮ್ಮ ಹಕ್ಕು ಅದನ್ನು ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ನಂತರ ಯಡಿಯೂರಪ್ಪ ಅವರಿಗೆ ನೀಡಿದ ಕ್ಯಾಬಿನೆಟ್ ಸ್ಥಾನಮಾನದ ಸವಲತ್ತು ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಸವಲತ್ತನ್ನು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ. ಇದನ್ನು ನಾನು ಒಪ್ಪಿಕೊಂಡಿದ್ದೇನೆ. ಅವರಿಗೆ ನಿಕಟ ಪೂರ್ವ ಸಿಎಂ‌ಗೆ ಸಿಗಬೇಕಾದ ಸ್ಥಾನಮಾನ ಎಂದಿನಂತೆ ನೀಡುತ್ತೇವೆ ಎಂದು ಹೇಳಿದರು.

ಸಂಪುಟ ರಚನೆ ಬಳಿಕ ಪಕ್ಷದಲ್ಲಿ ಬಂಡಾಯ ಭುಗಿಲೆದ್ದಿರುವ ವಿಚಾರದ ಕುರಿತು ಮಾತನಾಡಿ, ಸಚಿವ ಸಂಪುಟ ರಚನೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ವಿಶೇಷ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಯಾಗಿದೆ.  ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ ಇರಬಹುದು. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ. 

ಆನಂದ್ ಸಿಂಗ್ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದೇನೆ. ಮತ್ತೊಮ್ಮೆ ಕರೆದು ಮಾತನಾಡುತ್ತೇನೆ. ಶಾಸಕ ರಾಮದಾಸ್ ಆತ್ಮೀಯ ಸ್ನೇಹಿತರು. ಅವರೊಂದಿಗೂ ಮಾತನಾಡುತ್ತೇನೆ. ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನಗಳಷ್ಟೇ ಇದ್ದು ಅವುಗಳನ್ನು ಬಗೆಹರಿಸಲು ಪ್ರಯತ್ನಪಡುತ್ತಿದ್ದೇನೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.