ಸೆಪ್ಟೆಂಬರ್ ಮೊದಲ ವಾರದಲ್ಲಿ 10 ದಿನಗಳ ಅಧಿವೇಶನಕ್ಕೆ ಸರ್ಕಾರ ಚಿಂತನೆ
ಸೆಪ್ಟೆಂಬರ್ ಮೊದಲ ವಾರದಲ್ಲಿ 10 ದಿನಗಳ ಕಾಲ ಅಧಿವೇಶನವನ್ನು ನಗರದ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸೆಪ್ಟೆಂಬರ್ ಮೊದಲ ವಾರದಲ್ಲಿ 10 ದಿನಗಳ ಕಾಲ ಅಧಿವೇಶನವನ್ನು ನಗರದ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವಂತೆ ವಿವಿಧ ಭಾಗಗಳಿಂದ ಆಗ್ರಹಗಳು ಕೇಳಿ ಬರುತ್ತಿದ್ದು, ಕೋವಿಡ್ -19 ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸರ್ಕಾರ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲಾಗಿತ್ತು. ಈ ಅಧಿವೇಶನವು ಮಾರ್ಚ್ 4 ರಿಂದ 31ರವರೆಗೆ ನಡೆಯಬೇಕಿತ್ತು. ಆದರೆ, ಕೋವಿಡ್ ಏರಿಕೆಯಾದ ಹಿನ್ನೆಲೆಯಲ್ಲಿ ಮಾರ್ಚ್ 24ರವರೆಗೆ ಮಾತ್ರ ನಡೆಸಲಾಗಿತ್ತು.
ಸಂವಿಧಾನ 174ನೇ ನಿಯಮಗಳ ಪ್ರಕಾರ ಆರು ತಿಂಗಳಿಗೊಮ್ಮೆ ಅಧಿವೇಶನವನ್ನು ನಡೆಸಬೇಕಿದೆ. ಹೀಗಾಗಿ ಸರ್ಕಾರ ಸೆಪ್ಟೆಂಬರ್ 24ರೊಳಗಾಗಿ ಅಧಿವೇಶನವನ್ನು ನಡೆಸಬೇಕಿದೆ.
ಸರ್ಕಾರದ ಮೂಲಗಳ ಪ್ರಕಾರ, ಸೆಪ್ಟೆಂಬರ್ 6 ಅಥವಾ ಸೆಪ್ಟೆಂಬರ್ ಎರಡನೇ ವಾರದಲ್ಲಿ ಅಧಿವೇಶನ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, "ದಿನಾಂಕ ಮತ್ತು ವೇಳಾಪಟ್ಟಿಯನ್ನು ಸಂಪುಟ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿಯವರು ಮಾತನಾಡಿ, ಎಲ್ಲಾ ಕೋವಿಡ್ -19 ನಿಯಮಗಳನ್ನು ಅನುಸರಿಸುವ ಮೂಲಕ ಅಧಿವೇಶನ ನಡೆಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಇದನ್ನು ನಾನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮತ್ತು ಮುಂದಿನ ವಾರದ ವೇಳೆಗೆ ಅದನ್ನು ಸಂಪುಟದ ಮುಂದೆ ಅನುಮೋದನೆಗೆ ಇರಿಸಲಾಗುತ್ತದೆ. ಕೋವಿಡ್ -19 ಪರಿಸ್ಥಿತಿಗೆ ಅವಲಂಬಿಸಿ ಅಧಿವೇಶನದ ದಿನಗಳ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ.
ಇದಕ್ಕೂ ಮುನ್ನ ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಲು ಬಾಕಿ ಇರುವ ಮಸೂದೆಗಳ ವಿವರಗಳ ಕುರಿತು ಇಲಾಖೆ ಇನ್ನೂ ಮಾಹಿತಿ ಪಡೆದುಕೊಂಡಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರಿಗೆ ಇದು ಮೊದಲನೇ ಅಧಿವೇಶನವಾಗಿದೆ. ಈ ಬಾರಿಯ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸಾಂಕ್ರಾಮಿಕ ರೋಗದ ನಿರ್ವಹಣೆ, ಲಸಿಕೆ ಕೊರತೆ, ಪ್ರವಾಹ ಪರಿಸ್ಥಿತಿ ಹಾಗೂ ಇತರೆ ಹಲವಾರು ಸಮಸ್ಯೆಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


