ರಾಜಸ್ಥಾನಿ ಗ್ಯಾಂಗ್'ನಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ಇಬ್ಬರ ಬಂಧನ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ.ಮಾರುಕಟ್ಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, 2 ಕೋಟಿ ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ.ಮಾರುಕಟ್ಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, 2 ಕೋಟಿ ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.
ರಾಜಸ್ಥಾನ ಮೂಲದ ಪಪ್ಪುರಾಮ್ ಅಲಿಯಾಸ್ ಪಪ್ಪು (20), ಚುನ್ನಿಲಾಲ್ (20) ಬಂಧಿತರು. ಆರೋಪಿಗಳಿಂದ ಒಂದು ಕೆ.ಜಿ 820 ಗ್ರಾಂ ಬ್ರೌನ್ ಶುಗರ್, 859 ಗ್ರಾಂ ಎಂಡಿಎಂಎ, ಒಂದು ಕೆಜಿ ಮಿಕ್ಸಿಂಗ್ ಪೌಡರ್, 1,700 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು, ದ್ವಿಚಕ್ರ ವಾಹನ, ಎರಡು ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಮಾದಕ ವಸ್ತುವಿನ ಮೌಲ್ಯ ರೂ.2 ಕೋಟಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಎಂ.ಪಾಟೀಲ್ ಅವರು ಹೇಳಿದ್ದಾರೆ.
ಬಂಧಿತ ಪಪ್ಪುರಾಮ್ ಬಿಎ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾನೆ. ಆರೋಪಿಗಳು ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ತಮ್ಮ ಪರಿಚಿತ ಗ್ರಾಹಕರಿಗೆ ಮಾತ್ರ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂಬ ಕಾರಣದಿಂದ ಹೊಸಬರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರಲಿಲ್ಲ. ಕೆಲ ತಿಂಗಳಿನಿಂದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಇವರಿಗಾಗಿ ಶೋಧ ನಡೆಸುತ್ತಿದ್ದರು.
ಆರೋಪಿಗಳಿಬ್ಬರು ಗೋಡೌನ್ ಸ್ಟ್ರೀಟ್ ನಲ್ಲಿ ಭಾನುವಾರ ಸಂಜೆ 5.30ರ ಸುಮಾರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಟಿ ಮಾರುಕಟ್ಟೆ ಠಾಣೆಯ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರಸ್ವಾಮಿಯವರ ತಂಡಕ್ಕೆ ಮಾಹಿತಿ ಲಭ್ಯವಾಗಿದೆ. ಇನ್ಸ್ ಪೆಕ್ಟರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಪಪ್ಪುರಾಮ್ ಚಂದಾಪುರ, ಆನೇಕಲ್ ಭಾಗದಲ್ಲಿ ಮನೆ ಮಾಡುತ್ತಿದ್ದ. ಪ್ರತಿ ಮೂರು ತಿಂಗಳಿಗೊಮ್ಮೆ ಮನೆ ಹಾಗೂ ಸಿಮ್ ಕಾರ್ಡ್ ಬದಲಿಸುತ್ತಿದ್ದ. ಮಾದಕ ವಸ್ತುವನ್ನು ಸಂಗ್ರಹಿಸಿ ಇಡಲು ಒಂದು ಸಣ್ಣ ರೂಮ್ ಮಾಡಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


