ಜಾರಕಿಹೊಳಿ ವಿರುದ್ಧ ಚೆಕ್ ಬೌನ್ಸ್ ಕೇಸ್: ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ
ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್'ಗೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಳಗಾವಿ: ಸಹಕಾರಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಭದ್ರತೆಯಾಗಿ ನೀಡಿದ್ದ ರೂ.5.02 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್'ಗೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರಕರಣ ಸಂಬಂಧ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಸಾಲಪಡೆದಿದ್ದು, ಅದಕ್ಕೆ ಭದ್ರತೆಯಾಗಿ ನೀಡಿದ್ದ ರೂ.5.02 ಕೋಟಿ ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಇದರಿಂದ 2016ರ ಜ.28ರಂದು ರಮೇಶ್ ಜಾರಕಿಹೊಳಿ ವಿರುದ್ದ ಸೊಸೈಟಿಯ ಖಾಸಗಿ ದೂರು ದಾಖಲಿಸಿತ್ತು. ದೂರು 2019ರ ನ.20ರಂದು ಚಿಕ್ಕೋಡಿಯ 2ನೇ ಹೆಚ್ಚುವರಿ ಜೆಎಂಎಫ್'ಸಿ ಕೋರ್ಟ್ ಮುಂದೆ ವಿಚಾರಣೆಗೆ ಬಂದಿತ್ತು.
ಅಂದು ದೂರುದಾರರ ಪರ ವಕೀಲರು ಗೈರಾಗಿದ್ದರು. ಅದನ್ನು ಪರಿಗಣಿಸಿದ್ದ ಜೆಎಂಎಫ್'ಕೋರ್ಟ್, ದೂರುದಾರರ ಪರ ವಕೀಲರು ವಿಚಾರಣೆಗೆ ಸರಿಯಾಗಿ ಹಾಜರಾಗುತ್ತಿಲ್ಲ. ನೋಟಿಸ್ ನೀಡಿದ ಹೊರತಾಗಿಯೂ ದೂರುದಾರರು ಕೋರ್ಟ್ ಶುಲ್ಕ ಪಾವತಿಸಿಲ್ಲ. ಇದರಿಂದ ದೂರನ್ನು ಮುಂದುವರಿಸಲು ದೂರುದಾರರಿಗೆ ಆಸಕ್ತಿ ಇಳ್ಲ ಎಂಬುದು ತಿಳಿಯುತ್ತದೆ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸೊಸೈಟಿ ಹೈಕೋರ್ಟ್'ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


