ರಾಜ್ಯ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
ಸತೀಶ್ ರೆಡ್ಡಿ
Published On :

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. 

ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ. 

ಇಂದು ನಸುಕಿನ ಜಾವ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿತ್ತು. ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ. 

ಘಟನೆ ನಂತರ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ. 3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿತ್ತು. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.