ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: ಇಂದು 1,857 ಹೊಸ ಪ್ರಕರಣ ಪತ್ತೆ; 1,950 ಚೇತರಿಕೆ; 30 ಸಾವು
ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದ ಕೊರೋನಾ, ನಿನ್ನೆಯಿಂದ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ ಕೆಲ ದಿನಗಳಿಂದ ಇಳಿಕೆಯಾಗುತ್ತಿದ್ದ ಕೊರೋನಾ, ನಿನ್ನೆಯಿಂದ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ.
1950 ಸೋಂಕಿತರು ಇಂದು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗಿನ ಒಟ್ಟು ಗುಣಮುಖರಾದವರ ಸಂಖ್ಯೆ 2865067ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದಸ್ಯ 22728 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 30 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು 36911 ಸೋಂಕಿತರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಸೋಂಕಿನ ಪ್ರಮಾಣ ಶೇ. 1.15 ರಷ್ಟಿದ್ದು, ಮರಣ ಪ್ರಮಾಣ ಶೇ. 1.61 ರಷ್ಟಿದೆ.
ಬೆಂಗಳೂರಿನಲ್ಲಿ 321 ಹೊಸ ಪ್ರಕರಣ ಪತ್ತೆಯಾಗಿದ್ದು, 413 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


