ರಾಜ್ಯ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಆರೋಪಿಗಳ ಪತ್ತೆಗೆ ಪೊಲೀಸರ ತಲಾಶ್

ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ: ಆರೋಪಿಗಳ ಪತ್ತೆಗೆ ಪೊಲೀಸರ ತಲಾಶ್
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ರೆಡ್ಡಿ
Published On :

ಬೆಂಗಳೂರು: ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಬೊಮ್ಮನಹಳ್ಳಿ ಪೊಲೀಸರು ಎಸಿಪಿ ಮೈಕೋ ಲೇ ಔಟ್ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳ ಪತ್ತೆಗಾಗಿ ವ್ಯಾಪಕ ಜಾಲ ಬೀಸಿರುವ ಪೊಲೀಸರು ದುಷ್ಕರ್ಮಿಗಳನ್ನು ಪತ್ತೆಹಚ್ಚುವ ವಿಶ್ವಾಸದಲ್ಲಿದ್ದಾರೆ.

ಇಂದು ನಸುಕಿನ ಜಾವ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

 ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ.3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ: ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೊ ದಾಖಲಾಗಿದೆ. ಮಧ್ಯರಾತ್ರಿ 1.30ರ ಸುಮಾರಿಗೆ ಎರಡು ಕಾರುಗಳು ಬಹುತೇಕ ಸುಟ್ಟುಹೋಗಿದೆ. ಕಾರಿನಿಂದ ಸ್ಫೋಟದ ಸದ್ದು ಕೇಳಿಬಂದಾಗ ನಮಗೆ ಎಚ್ಚರವಾಯಿತು. ಹೋಗಿ ನೋಡುವಾಗ ಕಾರುಗಳು ಹೊತ್ತಿ ಉರಿಯುತ್ತಿದ್ದವು. ನಂತರ ನಂದಿಸುವ ಕಾರ್ಯ ಮಾಡಿದೆವು.

ಈ ದುಷ್ಕೃತ್ಯವನ್ನು ಯಾರು ಮಾಡಿದರು,ಯಾಕೆ ಮಾಡಿದರು ಎಂದು ಗೊತ್ತಾಗುತ್ತಿಲ್ಲ, ನಾನಿಲ್ಲಿ ಯಾವ ಪಕ್ಷದವರ ಮೇಲೆ ಕೂಡ ಆರೋಪ ಹೊರಿಸುತ್ತಿಲ್ಲ, ರಾಜಕೀಯದಲ್ಲಿ ನನಗೆ ಯಾರೂ ಶತ್ರುಗಳಿಲ್ಲ, ಶಿವನ ಮೂರ್ತಿ ಪ್ರತಿಷ್ಠಾಪನೆ ವಿಚಾರ ಕೂಡ ಆಗಿರಲೂಬಹುದು, ಪೊಲೀಸರು ಹಲವು ಆಯಾಮಗಳಿಂದ ತನಿಖೆ ನಡೆಸುತ್ತಿದ್ದು ಆರೋಪಿಗಳು ಸಿಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.