ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣದ ತನಿಖೆ ನಡೆಯುತ್ತಿದೆ, ಶೀಘ್ರದಲ್ಲೆ ಕಾರಣ ಪತ್ತೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಸಿ ಕ್ಯಾಮೆರಾದಿಂದ ಒಂದೆರಡು ಸುಳಿವು ಸಿಗುತ್ತಿತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದರ ಆಧಾರದ ಮೇಲೆ ಈಗಾಗಲೇ ತನಿಖೆ ಆರಂಭವಾಗಿದೆ. ನಗರ ಪೊಲೀಸ್ ಆಯುಕ್ತರು ಕೂಡ ಇಲ್ಲಿಗೆ ಬಂದು ಮಾಹಿತಿ ಪಡೆದುಕೊಂಡು ಹೋಗಿದ್ದಾರೆ ಎಂದರು.
ಬಿಜೆಪಿ ಶಾಸಕರೇ ಆಗಿರುವ ಸತೀಶ್ ರೆಡ್ಡಿಯವರಿಗೆ ಈ ರೀತಿ ಆಗಿರುವುದು ಬಹಳ ನೋವು ತಂದಿದೆ. ಒಬ್ಬ ಶಾಸಕರಿಗೇ ಹೀಗಾದರೆ ಸಾಮಾನ್ಯರ ಪಾಡೇನು ಎಂದು ಯೋಚಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಪುನರಾವರ್ತನೆಯಾಗದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ಘಟನೆ ಹಿಂದಿನ ಕಾರಣವೇನು ಎಂದು ಪತ್ತೆಹಚ್ಚಲಿದ್ದಾರೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


