ರಾಜ್ಯ

ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ; ಆಗಸ್ಟ್ 25 ರೊಳಗೆ ತನಿಖಾ ವರದಿ ಕೇಳಿದ ಹೈಕೋರ್ಟ್ 

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ರಾಜಾತಿಥ್ಯ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಖಲಿಸಲಾಗಿರುವ ಎಫ್ ಐಆರ್ ತನಿಖೆಯ ವಿವರಗಳನ್ನು ಹೈಕೋರ್ಟ್ ಶುಕ್ರವಾರ ಕೇಳಿದೆ.

ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ; ಆಗಸ್ಟ್ 25 ರೊಳಗೆ ತನಿಖಾ ವರದಿ ಕೇಳಿದ ಹೈಕೋರ್ಟ್ 
ಹೈಕೋರ್ಟ್, ಶಶಿಕಲಾ
Published On :

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ರಾಜಾತಿಥ್ಯ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಖಲಿಸಲಾಗಿರುವ ಎಫ್ ಐಆರ್ ತನಿಖೆಯ ವಿವರಗಳನ್ನು ಹೈಕೋರ್ಟ್ ಶುಕ್ರವಾರ ಕೇಳಿದೆ.  

ಆಗಸ್ಟ್ 25ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಎಸಿಬಿಗೆ ನಿರ್ದೇಶಿಸಿ  ಮುಖ್ಯ ನ್ಯಾಯಾಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಾಧೀಶ ಸುರಾಜ್ ಗೋವಿಂದ ರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಚೆನ್ನೈನ ಅಲ್ವಾರ್ ಪೇಟೆಯ ಸಾಮಾಜಿಕ ಕಾರ್ಯಕರ್ತೆ ಹಾಗೂ ಶಿಕ್ಷಣ ತಜ್ಞೆ ಕೆ ಎಸ್ ಗೀತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಂತರ ವಿಭಾಗೀಯ ಪೀಠ ಈ ಆದೇಶ ಹೊರಡಿಸಿತು.

ಬಹು ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾಗ ಅವರಿಗೆ ರಾಜಾತಿಥ್ಯ ನೀಡುವ ಆರೋಪ ಕುರಿತ ಅಂತಿಮ ವರದಿ ನೀಡಲು ಸಂಬಂಧಿತ ಸಂಸ್ಥೆಗೆ ನಿರ್ದೇಶಿಸಬೇಕೆಂದು ಗೀತಾ ನ್ಯಾಯಪೀಠದ ಮೊರೆ ಹೋಗಿದ್ದರು.

ಶಶಿಕಲಾ ಹಾಗೂ ಇಳವರಸಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ಆರೋಪದ ತನಿಖೆ ನಂತರ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಸಲ್ಲಿಸಿದ್ದ ಸಮಗ್ರ ವರದಿಯೊಂದನ್ನು ಅರ್ಜಿದಾರರು ಕೋರಿದಲ್ಲದೇ, ಈವರೆಗೂ ವಿಚಾರಣೆ ಕುರಿತ ಅಂತಿಮ ವರದಿ ನೀಡಿಲ್ಲ ಎಂದು ಹೇಳಿದ್ದರು.  ತದನಂತರ ಈ ಆರೋಪಗಳಿಗೆ ಸಂಬಂಧಿಸಿದಂತೆ ಎಸಿಬಿ 2018ರಲ್ಲಿ ಎಫ್ ಐಆರ್ ದಾಖಲಿಸಿರುವುದಾಗಿ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.