ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿರುವುದು: ಸಿ.ಟಿ ರವಿ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ತಿರುಗೇಟು
ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ರಾಮನಗರ: ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ನಮಗೆ ಸ್ಪಷ್ಟವಾದ ನಿಲುವಿದೆ. ಯಾರೊಬ್ಬರೂ ಈ ಯೋಜನೆಯನ್ನು ಕಡೆಗಣಿಸುವ ಪ್ರಮೇಯವೇ ಇಲ್ಲ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡಿನ ಅಭಿಪ್ರಾಯ ಕೇಳಬೇಕು ಎಂಬ ಕೇಂದ್ರದ ನಿಲುವನ್ನು ತಮಿಳುನಾಡು ಸರ್ಕಾರ ಅನುಕೂಲ ಪಡೆಯುತ್ತಿದೆ. ಟ್ರಿಬ್ಯೂನಲ್‌ನಲ್ಲಿ ಹೇಳಿರುವುದನ್ನಷ್ಟೆ ನಾವು ಕೇಳುತ್ತಿದ್ದೆವೆ. ನಮಗೆ ಮೇಕೆದಾಟು ಯೋಜನೆ ಜಾರಿಗೆ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದರು. ಮೇಕೆದಾಟು ಯೋಜನೆ ಬಗ್ಗೆ ನಮ್ಮ ನಿಲುವು ಎಂದಿಗೂ ಬದಲಾಗುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


