ರಾಜ್ಯದಲ್ಲಿಂದು ಕೊರೋನಾದಿಂದ 25 ಸೋಂಕಿತರು ಸಾವು; 1,632 ಹೊಸ ಪ್ರಕರಣ, 1,612 ಜನರು ಗುಣಮುಖ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,632 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,92,8033ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,632 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,92,8033ಕ್ಕೆ ಏರಿಕೆಯಾಗಿದೆ.
1,612 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖರಾದವರ ಸಂಖ್ಯೆ 2,86,8351ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 22,698 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 25 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 36958ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.04 ರಷ್ಟಿದ್ದು, ಮರಣ ಪ್ರಮಾಣ ಶೇ. 1.53 ರಷ್ಟಿದೆ.
ಬೆಂಗಳೂರು ನಗರದಲ್ಲಿ 377 ಹೊಸ ಪ್ರಕರಣಗಳು ದೃಢಪಟ್ಟಿದ್ದು, 365 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


