ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆಗಳಿಗೂ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!
ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಈ ಬಾರಿಯೂ ನಾಡ ಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ನೀಡಲಾಗುತ್ತದೆ..

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಈ ಬಾರಿಯೂ ನಾಡ ಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಅನುಮತಿ ನೀಡಲಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸಿದೆ.
ಏಕೆಂದರೆ ಈ ಬಾರಿ ಕೇವಲ ಮಾವುತರು, ಕಾವಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ.
ಕಳೆದ ವರ್ಷ, ಆನೆಗಳನ್ನು ಗಜಪಯಣದ ನಂತರ ಮೈಸೂರಿಗೆ ಕರೆತಂದಾಗ ಕೋವಿಡ್ ಪರೀಕ್ಷಿಸಲಾಯಿತು ಮತ್ತು 13-14 ಆನೆಗಳ ಬದಲಾಗಿ ಕೇವಲ ಐದು ಆನೆಗಳನ್ನು ಮಾತ್ರ ಕರೆ ತರಲಾಗಿತ್ತು. ಅಭಿಮನ್ಯು(ಚಿನ್ನದ ಅಂಬಾರಿ ಹೊತ್ತಿದ್ದ), ವಿಕ್ರಮ್, ಕಾವೇರಿ ಮತ್ತು ವಿಜಯ ಸೇರಿದಂತೆ ಮೂರು ಗಂಡು ಮತ್ತು ಎರಡು ಹೆಣ್ಣು.
ಈ ವರ್ಷ, ಅರಣ್ಯ ಇಲಾಖೆ, ಪಶುವೈದ್ಯರು ಮತ್ತು ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಆನೆ ಶಿಬಿರಗಳಿಗೆ ಹೋಗಿ ಕೋವಿಡ್ ಪರೀಕ್ಷೆ ಮಾಡಲು ನಿರ್ಧರಿಸಿದ್ದಾರೆ.
"ಪಶುವೈದ್ಯರ ನೇತೃತ್ವದ ತಂಡವು ಮೈಸೂರು ಮತ್ತು ಕೊಡಗು ಆನೆ ಶಿಬಿರಗಳಿಗೆ ಹೋಗಿ, ಈ ಐದು ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತದೆ. ಒಮ್ಮೆ ಅವುಗಳ ವೈದ್ಯಕೀಯ ವರದಿ ಸಾಮಾನ್ಯವಾಗಿದ್ದರೆ ಮತ್ತು ಅವುಗಳ ಕೋವಿಡ್ ಪರೀಕ್ಷಾ ವರದಿ ನೆಗಟಿವ್ ಬಂದ ನಂತರ ದಸರಾ ಆಚರಣೆಯಲ್ಲಿ ಭಾಗವಹಿಸುವ ಆನೆಗಳ ಅಂತಿಮ ಪಟ್ಟಿಯನ್ನು ತಯಾರಿಸಲಾಗುತ್ತದೆ ಎಂದು ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


