ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ
ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ.
ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.
ಆದಾಗ್ಯೂ, ಸ್ವಾತಂತ್ರ್ಯ ದಿನದ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು, ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.
ದೊಡ್ಡ ದೊಡ್ಡ ಸಭೆ ನಡೆಸುವಂತಿಲ್ಲ, ಸಾರ್ವಜನಿಕರಿಗೆ ಅವಕಾಶವಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮದ್ಯದ ಬಾಟಲಿಗಳನ್ನು ಒಳಗೆ ಒಯ್ಯಬಾರದು ಎಂಬ ನಿಯಮ ರೂಪಿಸಿ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


