75ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ
ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಭಾರತೀಯರಿಗೆ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಹಾರ್ದಿಕ ಶುಭಾಶಯಗಳು. ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ ಎಂದು ಹೇಳಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


