ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ
75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು.
ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಅವರು ಇಂದು ಬೆಳಗ್ಗೆ 7.15 ಕ್ಕೆ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಬಿಜೆಪಿ ಕಚೇರಿ, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮಾಚರಣೆಗೂ ಮುನ್ನ ತಮ್ಮ ನಿವಾಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ಯಡಿಯೂರಪ್ಪ ಅವರು, ಮಾಧ್ಯಮಗಳ ಮೂಲಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


