ರಾಜ್ಯ

ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ: ದಂಪತಿಗಳಿಗೆ ಗಾಯ, ಸ್ಥಿತಿ ಗಂಭೀರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ನಿಗೂಢ ಸ್ಫೋಟ ಸಂಭವಿಸಿದ್ದು, ದಂಪತಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ: ದಂಪತಿಗಳಿಗೆ ಗಾಯ, ಸ್ಥಿತಿ ಗಂಭೀರ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ನಿಗೂಢ ಸ್ಫೋಟ ಸಂಭವಿಸಿದ್ದು, ದಂಪತಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ವಿಜಯನಗರದ ಹಂಪಿನಗರದ ಎರಡು ಅಂತಸ್ತಿನ ಮನೆಯೊಂದರ ಮೊದಲ ಮಹಡಿಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಸೂರ್ಯ ನಾರಾಯಣಶೆಟ್ಟಿ (74), ಪುಷ್ಪಾವತಮ್ಮ (70) ಎಂಬ ವೃದ್ಧ ದಂಪತಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

12.45 ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಅಕ್ಕಪಕ್ಕದ ಮನೆಯವರು ಬೆಚ್ಚಿಬಿದ್ದಿದ್ದಾರೆ. ಈ ಸ್ಫೋಟದಿಂದ ಸುಮಾರು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ. 

ಸ್ಫೋಟ ಹಿನ್ನೆಲೆಯಲ್ಲಿ ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ತುಂಡಾಗಿದೆ. ಸದ್ಯ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.