ಕಳೆದ ವಾರ ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣದಲ್ಲಿ ಕ್ಷೀಣತೆ; ಮೂರು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು
ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸಾವಿನ ಪ್ರಮಾಣ ದರ (ಸಿಎಫ್ಆರ್ ) ಶೇ 1. 73 ರಷ್ಟಿದ್ದರೆ ಎಂಟು ಜಿಲ್ಲೆಗಳಲ್ಲಿ ಶೂನ್ಯ ದಾಖಲೆ ವರದಿಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೇ. 10ಕ್ಕಿಂತಲೂ ಹೆಚ್ಚಾಗಿದೆ.

ಬೆಂಗಳೂರು: ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸಾವಿನ ಪ್ರಮಾಣ ದರ (ಸಿಎಫ್ಆರ್ ) ಶೇ 1. 73 ರಷ್ಟಿದ್ದರೆ ಎಂಟು ಜಿಲ್ಲೆಗಳಲ್ಲಿ ಶೂನ್ಯ ದಾಖಲೆ ವರದಿಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೇ. 10ಕ್ಕಿಂತಲೂ ಹೆಚ್ಚಾಗಿದೆ.
ರಾಜ್ಯ ವಾರ್ ರೂಮ್ ಮಾಹಿತಿ ಪ್ರಕಾರ, ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಮಗಳೂರು, ಗದಗ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಸಿಎಫ್ ಆರ್ ಶೂನ್ಯವಾಗಿದ್ದರೆ, ಕೊಡಗಿನಲ್ಲಿ ಶೇ 0.59 ರಷ್ಟಿದೆ.
ಬೆಂಗಳೂರು ನಗರ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಶೇ 2ಕ್ಕಿಂತಲೂ ಕಡಿಮೆಯಾಗಿದೆ. ಕೋಲಾರದಲ್ಲಿ ಶೇ, 11, ಧಾರವಾಡದಲ್ಲಿ ಶೇ 11.59 ಮತ್ತು ಹಾವೇರಿಯಲ್ಲಿ ಶೇ 12.50 ರಷ್ಟು ಸಾವಿನ ಪ್ರಮಾಣವಿದೆ.
ಈ ಮಧ್ಯೆ ರಾಜ್ಯದಲ್ಲಿ ಶನಿವಾರ 1,632 ಹೊಸ ಪ್ರಕರಣಗಳು ವರದಿಯಾಗಿದ್ದು, 25 ಸೋಂಕಿತರು ಸಾವನ್ನಪ್ಪಿದ್ದಾರೆ. 1,612 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇ 7.18ಕ್ಕೆ ಕುಸಿದಿದೆ. ಆಗಸ್ಟ್ ಆರಂಭದಲ್ಲಿ ಪಾಸಿಟಿವಿಟಿ ದರ ಶೇ 7.49 ರಷ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


