ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 340 ಸೇರಿ ಇಂದು 1,298 ಪ್ರಕರಣ ಪತ್ತೆ; 32 ಸಾವು!

ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಇಂದು 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 340 ಸೇರಿ ಇಂದು 1,298 ಪ್ರಕರಣ ಪತ್ತೆ; 32 ಸಾವು!
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಇಂದು 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 29,31,827ಕ್ಕೆ ಏರಿಕೆಯಾಗಿದೆ.

 ಇಂದು ಒಂದೇ ದಿನದಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 37039ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. 

ಬೆಂಗಳೂರಿನಲ್ಲಿ ಇಂದು 340 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1233512ಕ್ಕೆ ಏರಿಕೆಯಾಗಿದೆ. ಸೋಂಕು ಹೆಚ್ಚಳವಾದರೂ ಮರಣ ಪ್ರಮಾಣ ಇಳಿಕೆಯಾಗಿದ್ದು, ಇಂದು ನಗರದಲ್ಲಿ ಒಬ್ಬರು ಸೋಂಕಿತರು ಮಾತ್ರ ಸಾವನ್ನಪ್ಪಿದ್ದಾರೆ.  

ರಾಜ್ಯದಲ್ಲಿ ಇಂದು 1833 ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,73,281ಕ್ಕೆ ಏರಿಕೆಯಾಗಿದೆ. ಇನ್ನು 21481 ಸಕ್ರೀಯ ಪ್ರಕರಣಗಳಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.