ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ಗೆ ಸಿಎಂ ಬೊಮ್ಮಾಯಿ ಚಾಲನೆ
ಡಾ.ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸರಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಡಾ.ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸರಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಚಾಲನೆಗೊಳಿಸಿ ಮಾತನಾಡಿದ ಅವರು, 21ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು, ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ. ರಾಜ್ ಕುಮಾರ್ ಅವರ ಆ್ಯಪ್ ಬಹಳ ಉಪಯುಕ್ತವಾಗಲಿದೆ. ಮಕ್ಕಳಿಗೆ ತಕ್ರಬದ್ಧವಾಗಿ ಚಿಂತಿಸಲು ಪ್ರೇರಿಸಬೇಕು, ಆಗ ಸಹಜವಾಗಿ ಅರ ಸ್ಮೃತಿ ಪಟಲದಲ್ಲಿ ಉಳಿಯುತ್ತದೆ ಎಂದರು.
ಆ್ಯಪ್ ಗಳ ಮೂಲಕ ಜಗತ್ತನ್ನು ತಲುಪಲು ಸಾಧ್ಯ. ನೂತನ ಶಿಕ್ಷಣ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದು, ಈ ಆ್ಯಪ್ ಶಿಕ್ಷಣ ನೀತಿಗೆ ಅನುಕೂಲಕರವಾಗಲಿದೆ. ಭಾರತದಲ್ಲಿಯೇ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ತಿಳಿಸಿದರು.
ಡಾ. ರಾಜ್ ಕುಮಾರ್ ಅಂದರೆ ಒಬ್ಬ ಸಾಧಕ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ. ಕರ್ನಾಟಕದ ಅಂಥ ಏಕಮೇವ ತಾರೆ ಅಂದರೆ ಡಾ. ರಾಜ್ ಕುಮಾರ್. ಅವರ ಸರಳತೆ, ನಡೆ, ನುಡಿ ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರ, ಜನಪ್ರಿಯ ವ್ಯಕ್ತಿಗಳು ಕಲಿಯಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


