ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ

ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಕೋವಿಡ್-19: ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ (ಪಿಟಿಐ ಚಿತ್ರ)
Published On :

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಆದೇಶ ಹೊರಡಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ. 

ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಕೂಡ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಇದೀಗ, ರಾತ್ರಿ ಕರ್ಫ್ಯೂ  ಆದೇಶವನ್ನು ಈ ತಿಂಗಳ ಅಂತ್ಯದ ವರೆಗೆ ಮುಂದುವರಿಸಲಾಗಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.