ಸಿಎಸ್ಐಆರ್ ಪ್ರಶಸ್ತಿಗೆ ಉಡುಪಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸಿದ ರಾಷ್ಟ್ರಮಟ್ಟದ ‘ಸಿಎಸ್ಐಆರ್ ಇನ್ನೊ ವೇಷನ್ ಅವಾರ್ಡ್ ಫಾರ್ ಸ್ಕೂಲ್ ಚಿಲ್ಡ್ರನ್- 2021’ ಸ್ಪರ್ಧೆಯಲ್ಲಿ ಅಲ್ಬಾಡಿ - ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಇಬ್ಬರು ವಿದ್ಯಾರ್ಥಿನಿಯರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ.

ಉಡುಪಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸಿದ ರಾಷ್ಟ್ರಮಟ್ಟದ ‘ಸಿಎಸ್ಐಆರ್ ಇನ್ನೊ ವೇಷನ್ ಅವಾರ್ಡ್ ಫಾರ್ ಸ್ಕೂಲ್ ಚಿಲ್ಡ್ರನ್- 2021’ ಸ್ಪರ್ಧೆಯಲ್ಲಿ ಅಲ್ಬಾಡಿ - ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಇಬ್ಬರು ವಿದ್ಯಾರ್ಥಿನಿಯರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ.
ಅಲ್ಬಾಡಿ ಆರ್ಡಿಯ 10 ನೇ ತರಗತಿ ವಿದ್ಯಾರ್ಥಿನಿಯರಾದ ಅನುಷಾ ಹಾಗೂ ರಕ್ಷಿತಾ ನಾಯ್ಕ ಮಂಡಿಸಿದ ‘ಗ್ಯಾಸ್ ಸೇವಿಂಗ್ ಕಿಟ್’ (ಜಿಎಸ್ ಕೆ) ಅವಿಷ್ಕಾರದ ಸಾಧನ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ದೇಶದಲ್ಲಿ ಆಯ್ಕೆಯಾದ 14 ಶಾಲೆಗಳಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಅಲ್ಬಾಡಿ ಆರ್ಡಿ ಕೂಡ ಒಂದು.
ವಿಜೇತ ಶಾಲೆಗಳಲ್ಲಿ ದೇಶದಲ್ಲಿ ಸರ್ಕಾರಿ ಪ್ರೌಢಶಾಲೆ ಇದಾಗಿದೆ. ರಾಜ್ಯದಿಂದ ಆಯ್ಕೆ ಆಗಿರುವ ಏಕೈಕ ಶಾಲೆ ಹೆಗ್ಗಳಿಕೆ ಇದೆ. ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಹದಿನಾಲ್ಕು ಶಾಲೆಯ ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿ ನೀಡಲಿದ್ದಾರೆ.
ಜಿಎಸ್‌ಕೆ ಉಪಕರಣವನ್ನು ಗ್ಯಾಸ್ ಸ್ಟೌವ್‌ಗೆ ಅಳವಡಿಸಿದರೆ ಒಲೆಯ ಮೇಲೆ ಅಡುಗೆ ಆಗುತ್ತಿರುವಾಗಲೆ ಕುಟುಂಬಕ್ಕೆ ಬೇಕಾಗುವಷ್ಟು ಬಿಸಿ ನೀರು ಕಾಯಿಸಿಕೊಳ್ಳಬಹುದು. ದೇಶದಾದ್ಯಂತ ಎಲ್ಲ ಮನೆ, ಹೋಟೆಲ್‌ಗಳಲ್ಲಿ ಬಳಸಿದರೆ ದಿನಕ್ಕೆ ಲಕ್ಷಗಟ್ಟಲೆ ಟನ್ ಎಲ್‌ಪಿಜಿ ಉಳಿತಾಯವಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


