ತಾಲಿಬಾನ್ ಉಗ್ರರಿಂದ ದೇಶ ವಶ: ಆತಂಕದಲ್ಲಿ ಧಾರವಾಡಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು; ತವರಿಗೆ ಮರಳಲು ಚಡಪಡಿಕೆ
ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ್ನು ತಾಲಿಬಾನಿ ಉಗ್ರರು ವಶಪಡಿಸಿಕೊಂಡ ನಂತರ ಕಾಬುಲ್ ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನಾಟಕೀಯ ಬೆಳವಣಿಗೆಗಳನ್ನು ಇಡೀ ವಿಶ್ವವೇ ನಿನ್ನೆ ನೋಡಿದೆ.

ಧಾರವಾಡ: ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ್ನು ತಾಲಿಬಾನಿ ಉಗ್ರರು ವಶಪಡಿಸಿಕೊಂಡ ನಂತರ ಕಾಬುಲ್ ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನಾಟಕೀಯ ಬೆಳವಣಿಗೆಗಳನ್ನು ಇಡೀ ವಿಶ್ವವೇ ನಿನ್ನೆ ನೋಡಿದೆ.
ಇಂತಹ ಸಂದರ್ಭದಲ್ಲಿ ಭಾರತದಲ್ಲಿರುವ ಆಫ್ಘಾನಿಸ್ತಾನೀಯರು ತಮ್ಮ ಕುಟುಂಬಸ್ಥರು, ಮನೆಯವರ ಬಗ್ಗೆ ಬಹಳ ಆತಂಕಕ್ಕೀಡಾಗಿದ್ದಾರೆ. ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಆಫ್ಘಾನಿಸ್ತಾನ ಮೂಲಕ ವಿದ್ಯಾರ್ಥಿಗಳು ತಮ್ಮನ್ನು ವಾಪಸ್ ತಮ್ಮ ದೇಶಕ್ಕೆ ಕಳುಹಿಸಿಕೊಡಿ, ತಾವು ಕುಟುಂಬಸ್ಥರ ಜೊತೆ ಈ ಸಂದರ್ಭದಲ್ಲಿ ಇರಬೇಕು ಎಂದು ಕಾಲೇಜು ಮುಖ್ಯಸ್ಥರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಪ್ರಸ್ತುತ ಆಫ್ಘಾನಿಸ್ತಾನಕ್ಕೆ ವಿಮಾನಗಳಿಲ್ಲ, ಕಾಬೂಲ್ ಗೆ ತೆರಳಲಿರುವ ವಿಮಾನಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಆತಂಕಪೀಡಿತ ವಿದ್ಯಾರ್ಥಿಗಳು ನಿರಂತರವಾಗಿ ತಮ್ಮ ಕುಟುಂಬಸ್ಥರ ಜೊತೆ ಫೋನ್ ಮೂಲಕ ಮಾತನಾಡುತ್ತಲೇ ಇದ್ದಾರೆ. ಕಳೆದ ಕೆಲವು ದಿನಗಳಿಂದ ತಮ್ಮವರ ಪರಿಸ್ಥಿತಿಯನ್ನು ಕೇಳಿ ತಿಳಿದುಕೊಳ್ಳುತ್ತಲೇ ಇದ್ದಾರೆ. ತಾಲಿಬಾನಿಗಳು ಅಂತರ್ಜಾಲ ಮತ್ತು ದೂರವಾಣಿ ಸಂಪರ್ಕಗಳನ್ನು ಕಡಿತಗೊಳಿಸಲು ನಿರ್ಧರಿಸಿರುವುದರಿಂದ ತಮ್ಮ ಪ್ರೀತಿಪಾತ್ರರನ್ನು ಸಂಪರ್ಕಿಸಲು ಸಾಧ್ಯವಾಗದಿರಬಹುದು ಎಂದು ವಿದ್ಯಾರ್ಥಿಗಳು ಚಿಂತಿತರಾಗಿದ್ದಾರೆ.
ಧಾರವಾಡ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ 15 ಆಫ್ಘನ್ ವಿದ್ಯಾರ್ಥಿಗಳಲ್ಲಿ, ಐದು ಜನರು ಕೋವಿಡ್ ನಿರ್ಬಂಧಗಳಿಂದಾಗಿ ಎರಡು ತಿಂಗಳ ಹಿಂದೆ ಅಫ್ಘಾನಿಸ್ತಾನಕ್ಕೆ ತೆರಳಿದರು. ಆದರೆ 10 ವಿದ್ಯಾರ್ಥಿಗಳು, ಅವರಲ್ಲಿ ಕೆಲವರು ತಮ್ಮ ಪಿಎಚ್ಡಿಗಳನ್ನು ಮುಂದುವರಿಸುತ್ತಿದ್ದಾರೆ, ಅವರಿಗೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಸಹಾಯಕ್ಕಾಗಿ ಹತಾಶರಾದ ಅವರು ಈಗ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


