ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಪ್ರಯಾಣ ಕಾರಣವಾಗುತ್ತಿದೆ: ಬಿಬಿಎಂಪಿ
ಪ್ರಯಾಣಗಳು ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಪ್ರಯಾಣಗಳು ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಗರದಲ್ಲಿನ ಬಹುತೇಕ ಪ್ರಕರಣಗಳು ಹೊರವಲಯದಲ್ಲಿಯೇ ಪತ್ತೆಯಾಗುತ್ತಿವೆ. ಟ್ರಾವೆಲ್ ಹಿಸ್ಟರಿ ಇರುವವರು ಹಾಗೂ ಟ್ರಾವೆಲ್ ಹಿಸ್ಟರಿ ಇರುವ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳಲ್ಲಿ ಹೆಚ್ಚು ಸೋಂಕು ಪತ್ತೆಯಾಗುತ್ತಿವೆ ಎಂದು ಹೇಳಿದ್ದಾರೆ.
ಮಹದೇವಪುರ ಮತ್ತು ಬೊಮ್ಮನಹಳ್ಳಿಯಂತಹ ಉಪನಗರಗಳಲ್ಲಿ ಹೆಚ್ಚಿನ ಪ್ರಕರಣಗಳು ಮತ್ತು ಕಂಟೈನ್‌ಮೆಂಟ್ ವಲಯಗಳಿವೆ ಎಂದು ತಿಳಿಸಿದ್ದಾರೆ.
ಆರ್ಥಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಂಚರಿಸುತ್ತಿರುವಾಗ ಅನಿವಾರ್ಯವಲ್ಲದ ಹೊರತು, ಕಿಕ್ಕಿರಿದ ಮಾರುಕಟ್ಟೆಗಳಿಗೆ ಹೋಗುವುದನ್ನು ಜನರು ನಿಯಂತ್ರಿಸಬೇಕು ಎಂದಿದ್ದಾರೆ.
ಪ್ರಯಾಣಿಸುವುದು ಟ್ರೆಂಡ್ ಆಗಿ ಹೋಗಿದೆ. ಈ ಬೆಳವಣಿಗೆ ಆತಂಕದ ವಿಚಾರವಾಗಿದೆ. ಟ್ರಯಾಜಿಂಗ್ ಕೇಂದ್ರಗಳಿಗೆ ಬರುತ್ತಿರುವ ಬಹುತೇಕ ಜನರು ಟ್ರಾವೆಲ್ ಹಿಸ್ಟರಿ ಹೊಂದಿರುವವರಾಗಿದ್ದಾರೆ. ಇಂತಹವರು ವೈರಸ್ ನ್ನು ಹರಡುತ್ತಿದ್ದಾರೆಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


