ಬೆಂಗಳೂರು: ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿ ಡಾಲಿ ಸಾವು
34 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಚಂದ್ರಾಲೇಔಟ್ ಪೊಲೀಸರಿಂದ ಬಂಧನಕ್ಕೊಳಗಾಗಿ ಸೆಂಟ್ರಲ್ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬೆಂಗಳೂರು: 34 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಚಂದ್ರಾಲೇಔಟ್ ಪೊಲೀಸರಿಂದ ಬಂಧನಕ್ಕೊಳಗಾಗಿ ಸೆಂಟ್ರಲ್ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕೆ.ಪಿ ಅಗ್ರಹಾರ ನಿವಾಸಿ ಗಜೇಂದ್ರ ಅಲಿಯಾಸ್ ಡಾಲಿ ಮೃತ ಕೈದಿ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಜೇಂದ್ರ ಜೈಲು ಪಾಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದನು. ಜು.31ರಂದು ಗಿರಿನಗರ ಸೇರಿ ವಿವಿಧ ಕಡೆಗಳಲ್ಲಿ ತನ್ನ ಸಹಚರರೊಂದಿಗೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಆ.12ರಂದು ಚಂದ್ರಾಲೇಔಟ್ ವ್ಯಾಪ್ತಿಯ ವೃದ್ದೆಯೊಬ್ಬರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದನು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಗಿರಿನಗರದಲ್ಲಿ ಗಜೇಂದ್ರ ಸೇರಿ ಆತನ ಸಹಚರರು ಅವಿತುಕುಳಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಬಂಧಿಸಲು ಮುಂದಾಗಿದ್ದರು. ಈ ವೇಳೆ, ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗಜೇಂದ್ರ ಕಟ್ಟಡದಿಂದ ಹಾರಿ ಕೆಳಗೆ ಬಿದ್ದು ಎಡಗಾಲಿಗೆ ಗಾಯಮಾಡಿಕೊಂಡಿದ್ದರು. ಬಳಿಕ ಆತನನ್ನು ಪೊಲೀಸರು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಗಜೇಂದ್ರನನ್ನು ಆ.17ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದೇ ದಿನ ರಾತ್ರಿ ವಿಪರೀತ ಕಾಲು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳ ಅನುಮತಿ ಪಡೆದು ಸಿಬ್ಬಂದಿ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ, ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


