ನಕಲಿ ಫೇಸ್‌ಬುಕ್ ಪೋಸ್ಟ್ ಸಂಬಂಧ ಸೌದಿಯಲ್ಲಿ ಜೈಲು ಸೇರಿದ್ದ ಕರ್ನಾಟಕದ ವ್ಯಕ್ತಿ ತವರಿಗೆ ವಾಪಸ್
ನಕಲಿ ಫೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಾಗಿ 19 ತಿಂಗಳ ನಂತರ ಜೈಲಿನಿಂದ ಬಿಡುಗಡೆಗೊಂಡ ಉಡುಪಿ ಜಿಲ್ಲೆಯ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ...

ಮಂಗಳೂರು: ನಕಲಿ ಫೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಾಗಿ 19 ತಿಂಗಳ ನಂತರ ಜೈಲಿನಿಂದ ಬಿಡುಗಡೆಗೊಂಡ ಉಡುಪಿ ಜಿಲ್ಲೆಯ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ ಅವರು ಕೊನೆಗೂ ತಾಯ್ನಾಡಿಗೆ ಬಂದು ತಲುಪಿದ್ದಾರೆ.
ಹರೀಶ್ ಬಂಗೇರ ಅವರು ಆಗಸ್ಟ್ ೧೭ರಂದು ಸೌದಿಯಿಂದ ಹೊರಟು ಆಗಸ್ಟ್ ೧೮ರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಪತ್ನಿ, ಪುತ್ರಿ ಹಾಗೂ ಅವರ ಕುಟುಂಬಸ್ಥರು ಅವರನ್ನು ಬರಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಕಿಡಿಗೇಡಿಗಳು ಹರೀಶ್ ಬಂಗೇರ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ವ್ ಹಾಕಿದ್ದರು. ಈ ಕಾರಣಕ್ಕೆ ಹರೀಶ್ ಬಂಗೇರರನ್ನು ೨೦೧೯ರ ಡಿಸೆಂಬರ್ ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು.
ಈ ಬಗ್ಗೆ ಹರೀಶ್ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಮೂಡಬಿದ್ರೆಯ ಅಬ್ದುಲ್ ಹುಯೇಸ್ ಮತ್ತು ಅಬ್ದುಲ್ ತುವೇಸ್ ಎಂಬವರನ್ನು ಬಂಧಿಸಿದ್ದರು. ಅವರು ಹರೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅದರಲ್ಲಿ ಸೌದಿ ದೊರೆ ಮತ್ತು ಮೆಕ್ಕಾದ ವಿರುದ್ಧ ಪೋಸ್ಟ್ ಹಾಕಿ, ಅದರ ಸ್ಕ್ರೀನ್ ಶಾಟ್ ತೆಗೆದು ಅದನ್ನು ವೈರಲ್ ಮಾಡಿದ್ದರು ಮತ್ತು ನಂತರ ಈ ನಕಲಿ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


