ಬೆಂಗಳೂರು: 18 ಕುಖ್ಯಾತ ರೌಡಿಗಳ ಸ್ಥಳಾಂತರ
ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ.

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ರೌಡಿಗಳು, ಜೈಲಿನಲ್ಲಿದ್ದುಕೊಂಡೆ ತಮ್ಮ ಸಹಚರರ ಮೂಲಕ ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಡೆಸುವ ಸಂಚು ರೂಪಿಸುವ ಯತ್ನ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 18 ರೌಡಿಗಳನ್ನು ಜಿಲ್ಲಾಕೇಂದ್ರ ಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲು ಕಾರಾಗೃಹ ಇಲಾಖೆಯ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದರು.
ಇದೀಗ ಅವರ ಅನುಮತಿ ಪಡೆದು 18 ಜನ ರೌಡಿಗಳನ್ನು ಕಲಬುರಗಿ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಮೈಸೂರು, ವಿಜಯಪುರ, ಬಳ್ಳಾರಿ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


