ರಾಜ್ಯ

ಬೆಂಗಳೂರು: ಹಾಡಹಗಲೇ ವೃದ್ಧ ದಂಪತಿಯ ಹತ್ಯೆ

ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಹಾಡಹಗಲೇ ವೃದ್ಧ ದಂಪತಿಯ ಹತ್ಯೆಯಾಗಿದ್ದು, ಸಿಲಿಕಾನ್ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರು: ಹಾಡಹಗಲೇ ವೃದ್ಧ ದಂಪತಿಯ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಹಾಡಹಗಲೇ ವೃದ್ಧ ದಂಪತಿಯ ಹತ್ಯೆಯಾಗಿದ್ದು, ಸಿಲಿಕಾನ್ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ.

ಶಾಂತರಾಜು (70), ಪ್ರೇಮಲತಾ (65) ಹತ್ಯೆ‌ಗೀಡಾದ ದಂಪತಿ.ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಕೊಯ್ದು ದಂಪತಿಯನ್ನು ಹತ್ಯೆ ಮಾಡಿದ್ದಾರೆ.

ಹತ್ಯೆಗೀಡಾದ ಶಾಂತರಾಜು ಬಿಎಂಟಿಸಿ ನಿವೃತ್ತ ನೌಕರರಾಗಿದ್ದು, ಕಳೆದ 20 ವರ್ಷಗಳಿಂದ ಕಾಶಿನಗರದಲ್ಲಿ ವಾಸವಾಗಿದ್ದರು. ಹತ್ಯೆಯಾಗಿರುವ ದಂಪತಿಗೆ ಮಕ್ಕಳಿರಲಿಲ್ಲ. ಒಂದು ಮನೆಯಲ್ಲಿ ದಂಪತಿ ಇದ್ದು, ಇನ್ನೇರಡು ಮನೆಗಳನ್ನು ಬಾಡಿಗೆಗೆ ಕೊಟ್ಟಿದ್ದರು. ಮನೆಯಲ್ಲಿ ಮೂವರು ಚಹಾ ಕುಡಿದ ಲೋಟಗಳು ಟೇಬಲ್ ಮೇಲಿವೆ. ಚಿನ್ನಾಭರಣ ಹಾಗೂ ಹಣ ದೋಚುವ ಸಲುವಾಗಿ ಪರಿಚಯವಿದ್ದವರೇ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ನಗರ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.